ನಾಳೆ ರಾಜ್ಯಕ್ಕೆ ಆಗಮಿಸಲಿರುವ ಅಮಿತ್ ಶಾ
ಬೆಂಗಳೂರು: ಮಾರ್ಚ 31 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ನಾಳೆ ರಾತ್ರಿ 10:30 ಕ್ಕೆ ಬೆಂಗಳೂರಿಗೆ ಆಗಮಿಸಿ. ಏ 1 ರಂದು ಸಿದ್ಧಗಂಗಾ ಮಠದಲ್ಲಿ ನಡೆಯುವ ಶ್ರೀ ಶಿವಕುಮಾರ ಸ್ವಾಮುಜಿಗಳ 115ನೇ ಜನ್ಮದಿನೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಹಾಗೇ ತುಮಕೂರಿನಲ್ಲಿ ಭೋಜನ ಮಾಡಿಕೊಂಡು ಚಿಕ್ಕಬಳ್ಳಾಪುರಕ್ಕೆ ತೆರಳಲಿದ್ದಾರೆ ಎಂದು ತಿಳಿಸಿದರು.
ತುಮಕೂರಿನ ಮುದ್ದೇನಹಳ್ಳಿಯಲ್ಲಿ ಆಸ್ಪತ್ರೆ ಕಟ್ಟಡಕ್ಕೆ ಶಂಕುಸ್ಥಾಪನೆ ಮಾಡಿ, ನಂತರ ಬೆಂಗಳೂರಿನಲ್ಲಿ ಸಹಕಾರ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಳಿಕ ಸಂಜೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಅರಮನೆ ಮೈದಾನದಲ್ಲಿ ನಡೆಯಲಿರುವ ಸಹಕಾರ ಸಮ್ಮೇಳನ ಕಾರ್ಯಕ್ರಮದಲ್ಲಿ ನಂದಿನಿ ಕ್ಷೀರಾಭಿವೃದ್ಧಿ ಬ್ಯಾಂಕ್ ಲೋಗೊ ಬಿಡುಗಡೆ ಮಾಡಲಿದ್ದಾರೆ. ನಂದಿನಿ ಕ್ಷೀರಾಭಿವೃದ್ದಿ ಬ್ಯಾಂಕ್ನ್ನು ಬಜೆಟ್ನಲ್ಲಿ ಘೋಷಿಸಿದ್ದೇವೆ. ಹಾಲು ಉತ್ಪಾದನೆ ಮತ್ತು ಇತರ ಚಟುವಟಿಕೆಗಳಿಗೆ ಆರ್ಥಿಕ ಸಂಸ್ಥೆ ಇರಬೇಕೆಂದು ಮನಗಂಡು ರಾಜ್ಯ ಸರ್ಕಾರ 100 ಕೋಟಿ ರೂ. ನೀಡುತ್ತಿದೆ ಎಂದು ಹೇಳಿದರು