ಭೋಪಾಲ್: ಆರ್ಟಿಕಲ್ 370 ತಂಟೆಗೆ ಬಾರದಂತೆ ಕಾಂಗ್ರೆಸ್ ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಚ್ಚರಿಕೆ ನೀಡಿದ್ದಾರೆ.
ಮಧ್ಯಪ್ರದೇಶದ ಮಂಡ್ಲಾದಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸುವ ನಿರ್ಧಾರ, ಬಿಜೆಪಿ ಕಾರ್ಯಕರ್ತರು ಹಾಗೂ ಪ್ರಧಾನಿ ಅವರದ್ದು, ಇದನ್ನು ಬದಲಾಯಿಸುವ ಸಾಹಸಕ್ಕೆ ಯಾರೂ ಹೋಗಬೇಡಿ ಎಂದಿದ್ದಾರೆ.
ಕಾಂಗ್ರೆಸ್ ಯಾವಾಗಲೂ ಅಧಿಕಾರಕ್ಕೆ ಬರಲ್ಲ. ಒಂದು ವೇಳೆ ಬಂದರೆ 370ನೇ ವಿಧಿಯನ್ನು ಬದಲಾಯಿಸಲು ಧೈರ್ಯ ಮಾಡಬೇಡಿ ಎಂದು ನಾನು ಕಾಂಗ್ರೆಸ್‍ಗೆ ಎಚ್ಚರಿಕೆ ನೀಡುತ್ತೇನೆ ಎಂದು ಹೇಳಿದ್ದಾರೆ. 10 ವರ್ಷಗಳಲ್ಲಿ ಪ್ರಧಾನಿ ಮೋದಿ ಅವರು ಹಿಂದುಳಿದ ವರ್ಗ ಹಾಗೂ ಬುಡಕಟ್ಟು ಜನಾಂಗದವರಿಗೆ ಸಾಕಷ್ಟು ಯೋಜನೆ ಜಾರಿಗೆ ತಂದಿದ್ದಾರೆ. ಬುಡಕಟ್ಟು ಜನಾಂಗದ ಐಕಾನ್ ಬಿರ್ಸಾ ಮುಂಡಾ ಅವರ ಜನ್ಮದಿನವನ್ನು `ಜನಜಾತಿಯ ಗೌರವ್ ದಿವಸ್’ ಎಂದು ಆಚರಿಸುತ್ತಿರುವುದು ಪ್ರಧಾನಿ ಮೋದಿ ಆಲೋಚನೆ ಎಂದು ಹೇಳಿದ್ದಾರೆ.