ಬೆಂಗಳೂರು: ಸಂಕ್ರಾಂತಿಗೂ ಮೊದಲು ನಡೆದ ಸಚಿವ ಸಂಪುಟ ವಿಸ್ತರಣೆ ಹಾಗೂ ಯತ್ನಾಳ್ ಸಿಡಿ ಬಾಂಬ್ ಬೆನ್ನಲ್ಲೇ ಇಂದು ಹಾಗೂ ನಾಳೆ ಎರಡು ದಿನಗಳ ಭೇಟಿಗಾಗಿ ಬಿಜೆಪಿ ಚಾಣಾಕ್ಯ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಬರುತ್ತಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಸಿಗದ್ದಕ್ಕೆ ಯತ್ನಾಳ್, ರೇಣುಕಾಚಾರ್ಯ, ಸತೀಶ್ ರೆಡ್ಡಿ ಸೇರಿದಂತೆ ಹಲವು ಶಾಸಕರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಬಹಿರಂಗ ಬಂಡಾಯ ಸಾರಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಅವರಂತೂ ಒಂದು ಹೆಜ್ಜೆ ಮುಂದೆ ಹೋಗಿ ಸಿಎಂ ಬಿಎಸ್‍ವೈ ಸಿಡಿ ವಿಚಾರವಾಗಿ ಬಹಿರಂಗ ಹೇಳಿಕೆ ನೀಡಿರುವುದು ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.
ಈ ಬೆಳವಣಿಗೆಗಳ ನಡುವೆಯೇ ಚಾಣಾಕ್ಯ ಅಮಿತ್ ಶಾ ಬೆಂಗಳೂರು, ಭದ್ರಾವತಿ, ಬಾಗಲಕೋಟೆ ಹಾಗೂ ಬೆಳಗಾವಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಇಂದು ಬೆಳಗ್ಗೆ 9 ಗಂಟೆಗೆ ನವದೆಹಲಿಯಿಂದ ಹೊರಡುವ ಅಮಿತ್ ಶಾ, 11.30ಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಭದ್ರಾವತಿಗೆ ತೆರಳಿ ರ್ಯಾಪಿಡ್ ಆಕ್ಷನ್ ಫೋರ್ಸ್ ಸೆಂಟರ್ ಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ನಂತರ ಬೆಂಗಳೂರಿಗೆ ವಾಪಸ್ ಆಗಲಿರುವ ಶಾ, ವಿಧಾನಸೌಧದಲ್ಲಿ ಇಆರ್‍ಎಸ್‍ಎಸ್ ವಾಹನಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.
ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು 6 ಗಂಟೆಗೆ ಮುಖ್ಯಮಂತ್ರಿಗಳ ಚೆಂಬರ್‍ಗೆ ಭೇಟಿ ನೀಡಿ ನಂತರ ವಿಧಾನಸೌಧದ ಕಾನ್ಫರೆನ್ಸ್ ಹಾಲ್‍ನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.
ನಂತರ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ. ರಾಜ್ಯ ಸರ್ಕಾರ ಹಾಗೂ ಬಿಜೆಪಿಯ ಬೆಳವಣಿಗೆಗಳ ಬಗ್ಗೆ ತಲೆಕೆಡಿಸಿಕೊಳ್ಳದೆ ದೂರವೇ ಇದ್ದ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಶಾಸಕರು, ಸಂಸದರಿಗೆ ಕ್ಲಾಸ್ ತೆಗೆದುಕೊಳ್ಳುವ ಎಲ್ಲಾ ಸಾಧ್ಯತೆಗಳಿವೆ ಎನ್ನಲಾಗಿದೆ.
ನಾಳೆ ಕುಂದಾನಗರಿಯಲ್ಲಿ ಶಕ್ತಿ ಪ್ರದರ್ಶನ
ಭಾನುವಾರ ಬೆಳಗ್ಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಬೆಳಗಾವಿಗೆ ತೆರಳಿರುವ ಅಮಿತ್ ಶಾ, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಬಾಗಲಕೋಟೆಗೆ ತೆರಳಲಿದ್ದಾರೆ. ಸಚಿವ ಮುರುಗೇಶ ನಿರಾಣಿ(ಎಂಆರ್‍ಎನ್ ಲಿಮಿಟೆಡ್) ಒಡೆತನದ ಸಕ್ಕರೆ ಕಾರ್ಖಾನೆಯಲ್ಲಿ ಎಥೆನಾಲ್ ಪ್ರೊಜೆಕ್ಟ್ ನ್ನು ಅಮಿತ್ ಶಾ ಉದ್ಘಾಟಿಸಲಿದ್ದಾರೆ.
ನಂತರ ಬೆಳಗಾವಿಗೆ ವಾಪಸ್ ಆಗಮಿಸಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುಯುವ ಬಿಜೆಪಿಯ ಜನಸೇವಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಳೆದ ವರ್ಷ ಕೇಂದ್ರ ಸಚಿವ ಸುರೇಶ ಅಂಗಡಿ ಕೊರೊನಾಕ್ಕೆ ಬಲಿಯಾದ ನಂತರ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಶೀಘ್ರವೇ ಘೋಷಣೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಜನಸೇವಕ ಸಮಾವೇಶದ ನೆಪದಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಂಡು ಕಾರ್ಯಕರ್ತರು ಹಾಗೂ ಮತದಾರರಿಗೆ ಸಂದೇಶ ನೀಡುವ ಸಾಧ್ಯತೆ ಇದೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಸಮಾವೇಶ ಮುಗಿದ ಬಳಿಕ ದಿ.ಸುರೇಶ್ ಅಂಗಡಿ ನಿವಾಸಕ್ಕೆ ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಲಿದ್ದಾರೆ. ನಂತರ ಖಾಸಗಿ ಹೊಟೆಲ್‍ನಲ್ಲಿ ಆಯೋಜಿಸಿರುವ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಸಂಜೆ ಬೆಳಗಾವಿಯಿಂದ ನವದೆಹಲಿಗೆ ತೆರಳಲಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








