ಬೆಂಗಳೂರು: ಸುಮಾರು ಒಂದು ವರ್ಷದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಬರುತ್ತಿದ್ದಾರೆ. ಸಂಕ್ರಾಂತಿ ನಂತರ ಅಂದರೆ ಜ.16 ಹಾಗೂ 17ರಂದು ಎರಡು ದಿನಗಳ ಕಾಲ ಬೆಂಗಳೂರು, ಭದ್ರಾವತಿ, ಬಾಗಲಕೋಟೆ ಹಾಗೂ ಬೆಳಗಾವಿಗೆ ಅಮಿತ್ ಶಾ ಭೇಟಿ ನೀಡುತ್ತಿದ್ದಾರೆ.
ಇದೇ 16 ಮತ್ತು 17ರಂದು ರಾಜ್ಯ ಪ್ರವಾಸ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಳಗಾವಿಯಲ್ಲಿ 4 ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಜ.16ರ ಶನಿವಾರ ಬೆಳಗ್ಗೆ 9 ಗಂಟೆಗೆ ನವದೆಹಲಿಯಿಂದ ಹೊರಡುವ ಅಮಿತ್ ಶಾ, 11.30ಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಭದ್ರಾವತಿಗೆ ತೆರಳಿ RAID ACTION FORCE ಸೆಂಟರ್ ಗೆ ಶಂಕುಸ್ಥಾಪನೆ ನೆರವೇರಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ನಂತರ ಬೆಂಗಳೂರಿಗೆ ಆಗಮಿಸಿ ವಿಧಾನಸೌಧದಲ್ಲಿ ಇಆರ್ಎಸ್ಎಸ್ ವಾಹನಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.
5 ಗಂಟೆಗೆ ವಿಧಾನಸೌಧದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು 6 ಗಂಟೆಗೆ ಮುಖ್ಯಮಂತ್ರಿಗಳ ಚೆಂಬರ್ಗೆ ಭೇಟಿ ನೀಡಿ ನಂತರ ವಿಧಾನಸೌಧದ ಕಾನ್ಫರೆನ್ಸ್ ಹಾಲ್ನಲ್ಲಿ ಹಿರಿಯ ಪೆÇಲೀಸ್ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.
ಭಾನುವಾರ ಬೆಳಗ್ಗೆ ವಿಶೇಷ ವಿಮಾನದ ಬೆಳಗಾವಿಗೆ ತೆರಳಿ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಬಾಗಲಕೋಟೆಗೆ ತೆರಳಲಿದ್ದಾರೆ. ಮುರುಗೇಶ ನಿರಾಣಿ(ಎಂಆರ್ಎನ್ ಲಿಮಿಟೆಡ್) ಒಡೆತನದ ಸಕ್ಕರೆ ಕಾರ್ಖಾನೆಯಲ್ಲಿ ಎಥೆನಾಲ್ ಪ್ರೊಜೆಕ್ಟ್ ನ್ನು ಅಮಿತ್ ಶಾ ಉದ್ಘಾಟಿಸಲಿದ್ದಾರೆ.
ನಂತರ ಬೆಳಗಾವಿಗೆ ಆಗಮಿಸಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುಯುವ ಬಿಜೆಪಿಯ ಜನಸೇವಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಮಾವೇಶ ಮುಗಿದ ಬಳಿಕ ಕಳೆದ ವರ್ಷ ಕೊರೊನಾಕ್ಕೆ ಬಲಿಯಾದ ಕೇಂದ್ರ ಸಚಿವ ಸುರೇಶ ಅಂಗಡಿ ನಿವಾಸಕ್ಕೆ ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಲಿದ್ದಾರೆ. ನಂತರ ಖಾಸಗಿ ಹೊಟೆಲ್ನಲ್ಲಿ ಆಯೋಜಿಸಿರುವ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಅಂದೇ ಬೆಳಗಾವಿಯಿಂದ ನವದೆಹಲಿಗೆ ತೆರಳಲಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








