ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ (Gavisiddeshwara Jatre) ಪ್ರತಿ ವರ್ಷ ಬಹಳ ವಿಜೃಂಭಣೆಯಿಂದ ನಡೆಯುತ್ತದೆ. ರಾಜ್ಯ ಸೇರಿದಂತೆ ಹೊರ ರಾಜ್ಯಗಳಿಂದ ಲಕ್ಷಾಂತರ ಜನರು ಜಾತ್ರೆ ಬರುತ್ತಾರೆ. ವಿವಿಧ ಕಾರ್ಯಕ್ರಮಗಳು ಜಾತ್ರೆಯಲ್ಲಿ ನಡೆಯುತ್ತಿರುತ್ತವೆ. ಈ ವರ್ಷವೂ ಈಗಾಗಲೇ ಹಲವು ಕಾರ್ಯಕ್ರಮಗಳ ಬಗ್ಗೆ ತಯಾರಿ ನಡೆಸಲಾಗುತ್ತಿದೆ.
ಈ ವರ್ಷ ಬಾಲಿವುಡ್ ನ ಹಿರಿಯ ನಟ ಅಮಿತಾಭ್ ಬಚ್ಚನ್ ಅವರಿಗೆ ಜಾತ್ರೆಗೆ ಅತಿಥಿಯಾಗಿ ಬರಲು ಆಹ್ವಾನ ನೀಡಲಾಗಿದೆ ಎನ್ನಲಾಗುತ್ತಿದೆ.
ಜನವರಿ 15ರಂದು ನಡೆಯಲಿರುವ ಗವಿಸಿದ್ದೇಶ್ವರ ಜಾತ್ರೆಗೆ ಆಮಂತ್ರಿಸಲು ಇತ್ತೀಚೆಗೆ ಮಠದ ಆಡಳಿತ ಮಂಡಳಿಯವರು ಅಮಿತಾಭ್ ಬಚ್ಚನ್ ಅವರನ್ನು ಭೇಟಿ ಮಾಡಿದ್ದರು ಎನ್ನಲಾಗಿದೆ. ಈ ವೇಳೆ, ಬಿಗ್ ಬಿ ಕೂಡ ಖುಷಿಯಿಂದ ಆಮಂತ್ರಣ ಸ್ವೀಕರಿಸಿ ಉತ್ತಮ ರೆಸ್ಪಾನ್ಸ್ ನೀಡಿದ್ದಾರೆ. ಹೀಗಾಗಿ ಅವರು ಈ ಜಾತ್ರೆಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.








