ದಿ.ಸುರೇಶ ಅಂಗಡಿ ಕುಟುಂಬಸ್ಥರಿಗೆ ಅಮಿತ್ ಶಾ ಸಾಂತ್ವನ

1 min read
amith shah

ಬೆಳಗಾವಿ: ಕೊರೊನಾಗೆ ಬಲಿಯಾದ ಕೇಂದ್ರ ಸಚಿವ ದಿ. ಸುರೇಶ್ ಅಂಗಡಿ ನಿವಾಸಕ್ಕೆ ಕೇಂದ್ರ ಗೃಹಸಚಿವ ಅಮಿತ್ ಶಾ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

amith shah
ಬೆಳಗಾವಿ ಪ್ರವಾಸದ ವೇಳೆ ಅಂಗಡಿ ಅವರ ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ನಿವಾಸಕ್ಕೆ ತೆರಳಿದ ಅಮಿತ್ ಶಾ, ಸುರೇಶ್ ಅಂಗಡಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಸುರೇಶ ಅಂಗಡಿಯವರು ಕೋವಿಡ್ ನಿಂದ ಬಳಲುತ್ತಿರುವಾಗ ನಾನೂ ಅದೇ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದೆ. ಅಂಗಡಿ ನಿಧನ ದೊಡ್ಡ ನಷ್ಟ ಉಂಟು ಮಾಡಿದೆ ಎಂದು ಅಮಿತ್ ಶಾ ಸಂತಾಪ ವ್ಯಕ್ತಪಡಿಸಿದರು.

amith shah
ಇದೇ ವೇಳೆ, ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿ, ಪುತ್ರಿಯರಾದ ಸ್ಫೂರ್ತಿ, ಶ್ರದ್ಧಾ ಅವರಿಗೆ ಸಾಂತ್ವನ ಹೇಳಿದರು. ಅಮಿತ್ ಶಾ ಜತೆ ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಜಗದೀಶ ಶೆಟ್ಟರ್ ಉಪಸ್ಥಿತರಿದ್ದರು.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd