ಕಾರ್ಖಾನೆಯೊಂದರಲ್ಲಿ ಅಮೋನಿಯಾ ಸೋರಿಕೆಯಾಗಿ ಹಲವರು ಅಸ್ವಸ್ಥರಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಘಟನೆಯಲ್ಲಿ ಹಲವಾರು ಜನರು ಅಸ್ವಸ್ಥರಾಗಿದ್ದಾರೆ. ರಸಗೊಬ್ಬರ ತಯಾರಿಕಾ ಕೇಂದ್ರವಾಗಿರುವ ಕೋರಮಂಡಲ್ ಇಂಟರ್ನ್ಯಾಶನಲ್ ಲಿಮಿಟೆಡ್ ಎನ್ನೋರ್ನಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿದ್ದು, ಹಲವರಲ್ಲಿ ಉಸಿರಾಟದ ಸಮಸ್ಯೆ ಉಂಟಾಗಿದೆ.
ಅಮೋನಿಯಾವನ್ನು ದ್ರವ ರೂಪದಲ್ಲಿ ಪಂಪ್ ಮಾಡಲು ಪೈಪ್ಲೈನ್ನಲ್ಲಿ ತಂಪಾಗಿಸುವ ಕಾರ್ಯವನ್ನು ಕಾರ್ಮಿಕರು ಮಾಡುತ್ತಿದ್ದರು. ಈ ಸಂದರ್ಭಲ್ಲಿ ಅನಿಲ ಸೋರಿಕೆಯಾಗಿದೆ ಎನ್ನಲಾಗುತ್ತಿದೆ. ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂಜು ಜಂಟಿ ಪೊಲೀಸ್ ಆಯುಕ್ತ ಪಿ.ವಿಜಯಕುಮಾರ್ ಹೇಳಿದ್ದಾರೆ.