ಅಪ್ರಾಪ್ತ ಬಾಲಕಿಯೊಂದಿಗೆ ಶಿಕ್ಷಕನೊಬ್ಬ (Music Teacher) ಸರಸ ಸಲ್ಲಾಪದಲ್ಲಿ ತೊಡಗಿದ್ದಾಗ ಸಿಕ್ಕಿ ಬಿದ್ದಿದ್ದು, ಇಬ್ಬರನ್ನೂ ವಿವಸ್ತ್ರಗೊಳಿಸಿ ಥಳಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ.
ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ (Viral Video) ಆಗಿದ್ದು, ಮೂವರು ವ್ಯಕ್ತಿಗಳು ಅಪ್ರಾಪ್ತ ಬಾಲಕಿ ಮತ್ತು ಶಿಕ್ಷಕನ ಬಟ್ಟೆ ಬಿಚ್ಚಿಸಿ ಹಲ್ಲೆ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. 40 ವರ್ಷದ ಸಂಗೀತ ಶಿಕ್ಷಕ ಈತ ಎನ್ನಲಾಗಿದೆ.
ಸಂತ್ರಸ್ತೆ ಹೇಳಿಕೆಯ ಮೇಲೆ ಸಂಗೀತ ಶಿಕ್ಷಕನನ್ನು ಬಂಧಿಸಿದ್ದೇವೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ಸೆಕ್ಷನ್ 67 ಬಿ ಮತ್ತು ಐಪಿಸಿಯ ಸೆಕ್ಷನ್ 376 ರ (ಲೈಂಗಿಕ ಅಪರಾಧ) ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್ಪಿ ಯೋಗೇಂದ್ರ ಕುಮಾರ್ ತಿಳಿಸಿದ್ದಾರೆ. ಅಲ್ಲದೇ, ಅಪ್ರಾಪ್ತ ಬಾಲಕಿಯ ಮೇಲೆ ಹಲ್ಲೆ ನಡೆಸಿದವರನ್ನು ಕೂಡ ಬಂಧಿಸಲು ಬಲೆ ಬೀಸಲಾಗಿದೆ.