
Bangalore-ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ನಾಗರಬಾವಿ ವಾರ್ಡ್ ವ್ಯಾಪ್ತಿಯಲ್ಲಿ ಅಮೃತ್ ನಗರೋತ್ಥಾನ ಕಾಮಗಾರಿಗಳಿಗೆ ಮಾನ್ಯ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ವಿ.ಸೋಮಣ್ಣ ರವರು ಪೂಜಾ ಕಾರ್ಯಕ್ರಮ ನೆರವೇರಿಸಿದರು.

ಜ್ಯೋತಿನಗರದ 1ನೇ ಕ್ರಾಸ್ ಹತ್ತಿರ ರಸ್ತೆ ಡಾಂಬರೀಕರಣ ಮತ್ತು ಚರಂಡಿ ಅಭಿವೃದ್ಧಿ, ಹೊಯ್ಸಳ ನಗರ ಸರ್ಕಲ್ ಹತ್ತಿರ ರಸ್ತೆ ಮೂಲಭೂತ ಸೌಕರ್ಯ ಅಭಿವೃದ್ಧಿ, ನಾಗರಬಾವಿ ಸರ್ಕಲ್ ಹತ್ತಿರ ರಸ್ತೆ ಡಾಂಬರೀಕರಣ ಮತ್ತು ಚರಂಡಿ ಅಭಿವೃದ್ಧಿ, ಎನ್.ಜಿ.ಇ.ಎಫ್ ಬಡಾವಣೆಯ ಪಾರ್ಕ್ ಹತ್ತಿರ ಬೃಹತ್ ನೀರುಗಾಲುವೆ ಕಾಮಗಾರಿಗೆ ಸಚಿವರು ಚಾಲನೆಯನ್ನು ನೀಡಿ ಸ್ಥಳ ಪರಿವೀಕ್ಷಣೆ ನಡೆಸಿದರು.

ಈ ಸಂದರ್ಭದಲ್ಲಿ ಬಿಬಿಎಂಪಿ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.








