ಸ್ವಾತಂತ್ರ್ಯದ ಅಮೃತ ಮಹೋತ್ಸವ – ಬಿಗಿ ಪೊಲೀಸ್ ಬಂದೋಬಸ್ತ್!
ಸ್ವಾತಂತ್ರ್ಯದ ಅಮೃತ ಮಹೋತ್ಸವ
ರಾಜ್ಯದಾದ್ಯಂತ ಬಿಗಿ ಪೊಲೀಸ್ ಭದ್ರತೆ
ಬೆಂಗಳೂರಿನಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ
ಈದ್ಗಾ ಮೈದಾನದಲ್ಲಿ ಫುಲ್ ಸೆಕ್ಯುರಿಟಿ
ಬೆಂಗಳೂರು : ನಾಳೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ರಾಜ್ಯದಾದ್ಯಂತ ಬಿಗಿ ಪೊಲೀಸ್ ಭದ್ರತೆ ಹಮ್ಮಿಕೊಳ್ಳಲಾಗಿದೆ.
ಅದರಲ್ಲೂ ಮುಖ್ಯವಾಗಿ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ವ್ಯವಸ್ಥೆ ಮಾಡಲಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಏಕಕಾಲದಲ್ಲಿ ಸಾಕಷ್ಟು ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ.
ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ದೊಡ್ಡ ಕಾರ್ಯಕ್ರಮ ನಡೆಯಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮೈದಾನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಓರ್ವ ಹೆಚ್ಚುವರಿ ಆಯುಕ್ತರು, 10 ಡಿಸಿಪಿಗಳು, 19 ಎಸಿಪಿಗಳು ಭದ್ರತಾ ಕಾರ್ಯದಲ್ಲಿ ಮುಂಚೂಣಿಯಲ್ಲಿದ್ದಾರೆ.

ಇನ್ನು ವಿವಾದಿತ ಸ್ಥಳ ಚಾಮರಾಜಪೇಟೆಯಲ್ಲಿನ ಈದ್ಗಾ ಮೈದಾನದಲ್ಲಿ ಕಂದಾಯ ಇಲಾಖೆಯಿಂದ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ.
ಇತ್ತೀಚಿನ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.
ಇತ್ತ ಕಾಂಗ್ರೆಸ್ ಪಕ್ಷದಿಂದ ಆಯೋಜನೆಗೊಂಡಿರುವ ಕಾಲ್ನಡಿಗೆ ಜಾಥಾವು ಪೊಲೀಸ್ ಭದ್ರತೆಯೊಂದಿಗೆ ಸಾಗಲಿದೆ.