ಬೆಂಗಳೂರು : ಆಸ್ಟ್ರಿಯಾ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್ ಅಡಿಯಲ್ಲಿ ಪುಟ್ಟಣ್ಣ ನಿರ್ಮಾಣ ಹಾಗೂ ಬರಗೂರು ರಾಮಚಂದ್ರಪ್ಪ ನಿರ್ದೇಶನದಲ್ಲಿ ಮೂಡಿ ಬಂದ ನಟಿ ಹರಿಪ್ರಿಯಾ ಅಭಿನಯದ ‘ಅಮೃತಮತಿ’ ಸಿನಿಮಾ ಆಯ್ಕೆಯಾಗಿದೆ.
ಈ ಸಿನಿಮಾ 13ನೇ ಶತಮಾನದಲ್ಲಿ ಕನ್ನಡದ ಖ್ಯಾತ ಕವಿ ಜನ್ನ ರಚಿಸಿದ ‘ಯಶೋಧರ ಚರಿತೆ’ ಕಾವ್ಯವನ್ನು ಆಧರಿಸಿದೆ. ಚಿತ್ರಕ್ಕೆ ಸುರೇಶ್ ಅರಸು ಸಂಕಲನ ಇದ್ದು, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನವಿದೆ. ಈ ಸಿನಿಮಾದಲ್ಲಿ ನಟಿ ಹರಿಪ್ರಿಯಾ ಅಮೃತಮತಿಯಾಗಿ ಕಾಣಿಸಿಕೊಂಡಿದ್ದಾರೆ. ಯಶೋಧರ ಪಾತ್ರದಲ್ಲಿ ಬಹುಭಾಷಾ ನಟ ಕಿಶೋರ್ ಕಾಣಿಸಿಕೊಂಡಿದ್ದಾರೆ.
ಆನ್ ಲೈನ್ ಸ್ಕ್ರೀನಿಂಗ್ ಮೂಲಕ ಚಿತ್ರೋತ್ಸವ
ವಿಶ್ವದಲ್ಲೆಡೆ ಕೊರೊನಾ ವೈರಸ್ ತಾಂಡವ ಆಡುತ್ತಿರುವ ಹಿನ್ನೆಲೆ ಆನ್ ಲೈನ್ ಸ್ಕ್ರೀನಿಂಗ್ ಮೂಲಕ ಚಿತ್ರೋತ್ಸವ ಆಯೋಜಿಸಲಾಗಿದೆ. ಈ ಚಿತ್ರೋತ್ಸವ ಜುಲೈ 22 ರಿಂದ ಆಗಸ್ಟ್ 5ರವರೆಗೆ ನಡೆಯಲಿದ್ದು, ಆನ್ ಲೈನ್ ಸ್ಕ್ರೀನಿಂಗ್ ಮಾಡಲ್ಪಟ್ಟ ಸಿನಿಮಾಗಳು ಸ್ಪರ್ಧಾಕಣದಲ್ಲಿಯೂ ಇರಲಿದೆ. ನಂತರ ಸಮಾರಂಭ ಆಯೋಜಿಸಿ ಅಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.








