Amritpal Singh : ಖಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಅಮೃತಪಾಲ್ ಸಿಂಗ್ ಬಂಧನ – ಇಂಟರ್ನೆಟ್ ಸೇವೆ ಬಂದ್….
ಖಲಿಸ್ತಾನ್ ಪ್ರತ್ಯೇಕತಾವಾದಿ ನಾಯಕ ಅಮೃತಪಾಲ್ ಸಿಂಗ್ ಅವರನ್ನ ಪಂಜಾಬ್ ಪೊಲೀಸರು ಜಲಂಧರ್ ಪಟ್ಟಣದಲ್ಲಿ ಬಂಧಿಸಿದ್ದಾರೆ. ಬಂಧನದ ಹಿನ್ನೆಲೆಯಲ್ಲಿ ಯಾವುದೇ ಉದ್ವಿಗ್ನತೆ ಉಂಟಾಗದಂತೆ ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಜಲಂಧರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
ರಾಜ್ಯಾದ್ಯಂತ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಭಾನುವಾರ ಮಧ್ಯಾಹ್ನದವರೆಗೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಅಮೃತಪಾಲ್ ಸಿಂಗ್ ಅವರನ್ನು ಶನಿವಾರ ಮಧ್ಯಾಹ್ನ ಜಲಂಧರ್ ಮತ್ತು ನಕೋದರ್ ನಲ್ಲಿ ಬಂಧಿಸಲಾಯಿತು. ಅಮೃತಪಾಲ್ ಸಿಂಗ್ ಅವರು ಖಲಿಸ್ತಾನ್ ಪ್ರತ್ಯೇಕತಾವಾದಿ ಚಳವಳಿಯನ್ನು ಮುನ್ನಡೆಸುತ್ತಿದ್ದರು. ಅಮೃತ್ ಪಾಲ್ ವಾರಿಸ್ ಪಂಜಾಬ್ ನ ಮುಖ್ಯಸ್ಥರಾಗಿದ್ದ. ಅಮೃತಪಾಲ್ ಸಿಂಗ್ ಮೊದಲು, ಅವರ ಎಂಟು ಪ್ರಮುಖ ಅನುಯಾಯಿಗಳನ್ನು ಪೊಲೀಸರು ಬಂಧಿಸಿದ್ದರು. ಬಹಳ ಹೊತ್ತಿನವರೆಗೆ ನಿಗಾ ಇಟ್ಟಿದ್ದ ಪೊಲೀಸರು ಯೋಜಿತ ಪ್ಲಾನ್ ಮಾಡಿ ಬಂಧಿಸಿದ್ದಾರೆ.
ಸದ್ಯ ಅಮೃತಪಾಲ್ ಸಿಂಗ್ ಅವರ ಅನುಯಾಯಿಗಳನ್ನ ಅಜ್ಞಾತ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ. ಅಮೃತಪಾಲ್ ಸಿಂಗ್ ಮತ್ತು ಆತನ ಅನುಯಾಯಿಗಳನ್ನು ಬಂಧಿಸಲು ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು. ಸುಮಾರು 50 ಪೊಲೀಸ್ ವಾಹನಗಳು ಅವರನ್ನು ಹಿಂಬಾಲಿಸಿ ಬಂಧಿಸಿದವು. ಅಮೃತಪಾಲ್ ಸಿಂಗ್ ಬಂಧನದ ಹಿನ್ನೆಲೆಯಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಕೇಂದ್ರ ಗೃಹ ಇಲಾಖೆ ಇಲ್ಲಿನ ಪರಿಸ್ಥಿತಿಯನ್ನು ಕಾಲಕಾಲಕ್ಕೆ ಅವಲೋಕಿಸುತ್ತಿದೆ.
Amritpal Singh : Khalistani separatist leader Amritpal Singh arrested – internet service shutdown….