‘ಅಮೃತ ಭಾರತಿಗೆ ಕನ್ನಡದಾರತಿ’ ಅಭಿಯಾನಕ್ಕೆ ಚಾಲನೆ
ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಉದ್ಘಾಟನೆ
ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆ
ರಾಜ್ಯದ 75 ಕಡೆಗಳ ಪೈಕಿ 45 ಕಡೆಗಳಲ್ಲಿ ಅಭಿಯಾನ ಪ್ರಾರಂಭ
ಪ್ರತಿ ಜಿಲ್ಲೆಗೆ 1.80 ಲಕ್ಷ ರೂ. ಅನುದಾನ ಬಿಡುಗಡೆ
ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ‘ಅಮೃತ ಭಾರತಿಗೆ ಕನ್ನಡದಾರತಿ’ ಅಭಿಯಾನಕ್ಕೆ ಸಿಎಂ ಬಸವರಾಜ ಬೊಮ್ಮಾಯಯಿ ಅವರು ಚಾಲನೆ ನೀಡಿದ್ದಾರೆ..
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ಸಚಿವರಾದ ರಾಜೀವ್ ಚಂದ್ರಶೇಖರ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದರು.
ರಾಜ್ಯದ 75 ಕಡೆಗಳ ಪೈಕಿ 45 ಕಡೆಗಳಲ್ಲಿ ಅಭಿಯಾನ ಪ್ರಾರಂಭವಾಗಿದೆ.. ಪ್ರತಿ ಜಿಲ್ಲೆಗೆ 1.80 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ.. ಇನ್ನುಳಿದ 30 ಕಡೆಗಳಲ್ಲಿ ಚುನಾವಣಾ ನೀತಿ ಸಂಹಿತಿ ಇರುವುದರಿಂದ ಅಲ್ಲಿನ ಮುಂದಿನ ದಿನಗಳಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು..
ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮದ ಮೆರವಣಿಗೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಚಾಲನೆ ನೀಡಲಾಯಿತು. ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ತುಳು ಅಕಾಡೆಮಿ ಅಧ್ಯಕ್ಷ ದಯಾನಂದ್ ಕತ್ತಲ್ ಸಾರ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಮೆರವಣಿಗೆಗೆ ಚಾಲನೆ ನೀಡಿದರು.