ಸನ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ ಗೆದ್ದ ‘ಅಮೃತಮತಿ’
ನಟಿ ಹರಿಪ್ರಿಯ ನಟನೆಯ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಅಮೃತಮತಿ’ ಚಿತ್ರ ಸನ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ ಗೆದ್ದುಕೊಂಡಿದೆ. ಇನ್ನೂ ಅದ್ಭುತ ಚಿತ್ರಕಥೆ ರಚನೆಗೆ ಬರಗೂರು ರಾಮಚಂದ್ರಪ್ಪ ಅವರು ವೈಯಕ್ತಿಕ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಅಂದ್ಹಾಗೆ ಕಳೆದ ವರ್ಷ ಅಟ್ಲಾಂಟ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅಮೃತಮತಿ ಸಿನಿಮಾ ಅತ್ಯುತ್ತಮ ವಿದೇಶಿ ಭಾಷಾ ಚಿತ್ರ ಪ್ರಶಸ್ತಿ ಗೆದ್ದುಕೊಂಡಿತ್ತು. 13ನೇ ಶತಮಾನದ ಜನ್ನ ಕವಿಯ ಯಶೋಧರ ಚರಿತೆ ಆಧರಿಸಿದ ಚಿತ್ರ ಇದಾಗಿದ್ದು, ಸಾಕಷ್ಟು ಮೆಚ್ಚುಗೆ ಗಳಿಸಿದೆ. ಈ ಮೂಲಕ ಸಿನಿಮಾ ಈವರೆಗೂ 10 ಚಿತ್ರೋತ್ಸವಗಳಿಗೆ ಆಯ್ಕೆಯಾಗಿದೆ. ಹರಿಪ್ರಿಯಾ 2 ಚಿತ್ರೋತ್ಸವಗಳಲ್ಲಿ ನಟಿ ಹರಿಪ್ರಿಯಾ ಅತ್ಯುತ್ತಮ ನಟಿ ಪ್ರಶಸ್ತಿ ಗೆದ್ದಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








