ಬೆಂಗಳೂರು : ಅಮೂಲ್ ವಿಲೀನವನ್ನು ಬೆಂಬಲಿಸಿದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ.
ನಂದಿನಿಯನ್ನು ಅಮೂಲ್‌ನಲ್ಲಿ ವಿಲೀನ ಮಾಡುತ್ತೇವೆ ಎಂದರೂ ಸಮರ್ಥನೆ. ಮೊಸರಿಗೆ ದಹಿ ಎಂದರೂ ಸಮರ್ಥನೆ. ನಂದಿನಿ ಮುಳುಗಿಸುವ ಷಡ್ಯಂತ್ರ ನಡೆದರೂ ಸಮರ್ಥನೆ. ಹಿಂದಿ ಹೇರಿಕೆಗೂ ಸಮರ್ಥನೆ. ಸಿಟಿ ರವಿ, ಮಹಾರಾಷ್ಟ್ರ, ಕರ್ನಾಟಕದ ನೆಲವನ್ನು ಕಬಳಿಸುವ ಸಂಚಿನ ಬಗ್ಗೆ ಏಕೆ ಮೌನ? ಅದನ್ನೂ ಸಮರ್ಥಿಸಿಕೊಳ್ಳಿ ಎಂದು ಕಾಂಗ್ರೆಸ್ ತೀವ್ರವಾಗಿ ಕಿಡಿಕಾರಿದೆ.
ಕನ್ನಡಿಗರು ತಮ್ಮ ಹಕ್ಕುಗಳಿಗಾಗಿ, ತಮ್ಮ ಭಾಷೆಯ ಉಳಿವಿಗಾಗಿ, ತಾವು ಕಟ್ಟಿ ಬೆಳೆಸಿದ ಸಂಸ್ಥೆಗಳಿಗಾಗಿ ಹೋರಾಡಿದಾಗೆಲ್ಲ ಅಣಕಿಸುವ, ಟೀಕಿಸುವ ಸಿ.ಟಿ ರವಿ, ನಿಮಗೆ ಕನ್ನಡದ ಮೇಲೆ, ಕನ್ನಡಿಗರ ಮೇಲೆ, ಕರ್ನಾಟಕದ ಮೇಲೆ ಯಾಕಿಷ್ಟು ದ್ವೇಷ, ತಾತ್ಸಾರ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಅಲ್ಲದೇ, ಸಿ.ಟಿ. ರವಿ ಅಂದರೆ, ಕನ್ನಡಿಗರ ಟೀಕೆ ರವಿ! ಕನ್ನಡಕ್ಕೆ ಕಂಟಕ ರವಿ! ಎಂದು ಕಾಂಗ್ರೆಸ್ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದೆ.








