ಪಾಕ್ ಪರ ಘೋಷಣೆ ಕೂಗಿ ಪೊಲೀಸ್ ಕಸ್ಟಡಿಯಲ್ಲಿ ಇದ್ದ ಪಾಕೃಮಿ ಅಮೂಲ್ಯ ಲಿಯೋನಾಲಿಗೆ ಮತ್ತೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ.
ಈ ಹಿಂದೆ ನಾಲ್ಕು ದಿನಗಳ ವರೆಗೆ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು ಮತ್ತು ಇಂದು ಕೊನೆಯ ದಿನವಾಗಿದ್ದ ಕಾರಣ ಕೋರಮಂಗಲದ ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಅಪರಾಧಿಯನ್ನು ಮುಂದಿನ 5 ದಿನಗಳ ಕಾಲ ಅಂದರೆ ಮಾರ್ಚ್ 5 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು.
ಹೆಚ್ಚಿನ ವಿಚಾರಣೆಗೆ ಈ ಹಿಂದೆ ಪೊಲೀಸ್ ಕಸ್ಟಡಿಗೆ ಪಡೆದ ತನಿಖಾ ತಂಡ ಅನೇಕ ಸ್ಪೋಟಕ ಮಾಹಿತಿಗಳನ್ನು ಕಲೆ ಹಾಕಿದ್ದು ಬೇರೆ ಬೇರೆ ಆಯಾಮಗಳಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಆಕೆಯ ವಿಚಾರಣೆ ಅಗತ್ಯ ಕಂಡು ಬಂದರೆ ಮತ್ತೆ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ.