ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಅಮೂಲ್ಯ ಲಿಯೋನಾಳನ್ನ ಇಂದು ಉಪ್ಪಾರಪೇಟೆ ಪೊಲೀಸರು ಹೆಚ್ಚಿನ ವಿಚಾರಣೆಗೆ ತಮ್ಮ ಕಸ್ಟಡಿಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಅಮೂಲ್ಯಳನ್ನ ತಮ್ಮ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ 5ನೇ ಎಸಿಎಂಎಂ ಕೋರ್ಟ್ಗೆ ಪೊಲೀಸರು ಮನವಿ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿದೆ.
ಎರಡು ದಿನಗಳ ಹಿಂದೆ ಪ್ರತಿಭಟನೆಯ ಆಯೋಜಕ ಇಮ್ರಾನ್ ಪಾಷಾರನ್ನ ಉಪ್ಪಾರಪೇಟೆ ಪೊಲೀಸರು ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಪಾಷಾ, ಅಮೂಲ್ಯಳನ್ನ ನಾವು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಹೇಳಿದ್ರು. ಪಾಷಾ ಅವರ ಹೇಳಿಕೆಯನ್ನು ಆಧರಿಸಿ ಹೆಚ್ಚಿನ ವಿಚಾರಣೆ ನಡೆಸಲು ಅಮೂಲ್ಯಳನ್ನ ಪೊಲೀಸರು ತಮ್ಮ ಕಸ್ಟಡಿಗೆ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.