ಸಂಪತ್ ರಾಜ್ ಗೆ ಆಶ್ರಯ ನೀಡಿದ್ದವ ಅಂದರ್
ಬೆಂಗಳೂರು : ಡಿ.ಜೆ.ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ತಲೆಮರೆಸಿಕೊಂಡಿದ್ದು, ಆತನಿಗೆ ಆಶ್ರಯ ನೀಡಿದ್ದ ಆರೋಪಿ ರಿಯಾಜುದ್ದೀನ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಮಾಹಿತಿ ನೀಡಿದ್ದು, ಡಿ.ಜೆ.ಹಳ್ಳಿ ಗಲಭೆ ಪ್ರಕರಣದಲ್ಲಿ ಸಂಪತ್ ರಾಜ್ ಹಾಗೂ ಜಾಕೀರ್ ಪಾತ್ರವಿರುವುದು ಅತ್ಯಂತ ಸ್ಪಷ್ಟವಾಗಿದೆ.

ಆರೋಪಿಗಳ ಬಂಧನಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದ್ದೇವೆ, ವಿಶೇಷ ತಂಡ ರಚಿಸಿ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದೇವೆ.
ಇನ್ನು ಆರೋಪಿಗಳು ತಲೆಮರೆಸಿಕೊಳ್ಳಲು ನೆರವು ಹಾಗೂ ಆಶ್ರಯ ನೀಡಲು ಸಹಕರಿಸಿದ್ದ ರಿಯಾಜುದ್ದೀನ್ ಎಂಬಾತನನ್ನು ಈಗಾಗಲೇ ಬಂಧಿಸಲಾಗಿದೆ.
ಈತ ನೀಡಿದ ಸುಳಿವು ಆಧರಿಸಿ ತಪ್ಪಿತಸ್ಥರನ್ನು ಶೀಘ್ರದಲ್ಲೇ ದಸ್ತಗಿರಿ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.
ಚುನಾವಣೆಯಲ್ಲಿ ಸೋತವರಿಗೆ ಮಂತ್ರಿಸ್ಥಾನ ಯಾಕೆ : ರೇಣುಕಾಚಾರ್ಯ
ಬಂಧಿತ ರಿಯಾಜುದ್ದೀನ್, ಮಾಜಿ ಮೇಯರ್ ಆರ್. ಸಂಪತ್‍ರಾಜ್ ಹಾಗೂ ಮಾಜಿ ಕಾರ್ಪೋರೇಟರ್ ಜಾಕೀರ್ ಸ್ನೇಹಿತ.
ಸದ್ಯ ತಲೆಮರೆಸಿಕೊಂಡಿರುವ ಸಂಪತ್ ರಾಜ್ ಹಾಗೂ ಜಾಕೀರ್ ಇಬ್ಬರೂ ಪರಾರಿಯಾಗಲು ರಿಯಾಜುದ್ದೀನ್ ಸಹಾಯ ಮಾಡಿದ್ದ.
ತನ್ನ ಕಾರಿನಲ್ಲಿ ಆರೋಪಿಗಳನ್ನು ನಾಗರಹೊಳೆ ಬಳಿ ಇರುವ ಫಾರ್ಮ್ ಹೌಸ್‍ಗೆ ಕರೆದೊಯ್ದಿದ್ದು, ಅಲ್ಲಿಯೇ ಆರೋಪಿಗಳು ಕೆಲ ದಿನ ಉಳಿದುಕೊಂಡಿದ್ದರು. ನಂತರ, ಅಲ್ಲಿಂದ ಬೇರೆಡೆ ಆರೋಪಿಗಳು ಹೊರಟು ಹೋಗಿದ್ದಾರೆ ಎಂದು ತಿಳಿದುಬಂದಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








