ಬೆಂಗಳೂರು : ಕೊರೊನಾ ಸೋಂಕು ನಿಯಂತ್ರಣ ಮಾಡಲು ರಾಜ್ಯ ಸರ್ಕಾರ ಮಾಸ್ಟರ್ ಪ್ಲ್ಯಾನ್ ರೂಪಿಸುತ್ತಿದೆ. ಕಳೆದ ಒಂದು ವಾರದಿಂದ ರಾಜ್ಯ ರಾಜಧಾನಿ ಬೆಂಗಳೂರನ್ನು ಲಾಕ್ ಡೌನ್ ಮಾಡಲಾಗುತ್ತದೆ ಎಂಬ ಚರ್ಚೆಗಳು ಪ್ರಾರಂಭವಾಗಿದ್ದವು. ಆದರೆ ಲಾಕ್ ಡೌನ್ ಮಾಡವುದಿಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದರು.
ಕೊರೊನಾ ನಿಯಂತ್ರಣ ಮಾಡಲು ಲಾಕ್ ಡೌನ್ ಒಂದೇ ದಾರಿಯಲ್ಲ ಎಂಬುದು ಸರ್ಕಾರದ ಲೆಕ್ಕಚಾರ.ಲಾಕ್ ಡೌನ್ ಬದಲಾಗಿ ಸೀಲ್ ಡೌನ್ ಮಾಡುವುದು ಸೂಕ್ತ ಜೊತೆಗೆ ಆರ್ಥಿಕವಾಗಿ ಬಲಗೊಳ್ಳುವುದು ಸರ್ಕಾರಕ್ಕೆ ಅನಿವಾರ್ಯವಾಗಿದೆ. ಆದ್ದರಿಂದ ಕೊರೊನಾ ನಿಯಂತ್ರಣ ಮಾಡಲ ವಿರೊಧ ಪಕ್ಷಗಳ ಸಲಹೆ ಪಡೆಯಲು ಸರ್ಕಾರ ಸರ್ವಪಕ್ಷ ಸಭೆ ಕರೆದಿದೆ.
ಸರ್ವ ಪಕ್ಷಸಭೆಯಲ್ಲಿ ಕೊರೊನಾ ನಿಯಂತ್ರಣ ಮಾಡಲು ಮತ್ತು ಆರ್ಥಿಕ ವೃದ್ದಿ ಮಾಡಲು ಯಾವ ಮಾರ್ಗಗಳಿದ್ದವೇ ಎಂಬುದುರ ಬಗ್ಗೆ ಸಲಹೆ ಪಡೆಯಲು ಸರ್ಕಾರ ಮುಂದಾಗಿದೆ. ಜೊತೆ ಪ್ರತಿಯೊಂದು ವಿಧಾನ ಸಭಾ ಕ್ಷೇತ್ರದ ಮೇಲೆ ಶಾಸಕರು ಹೆಚ್ಚು ನಿಗಾ ಇಡಬೇಕು ಎಂಬುದು ಮನವರಿಕೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ,
ಇಂದು ಬೆಂಗಳೂರಿನ ಎಲ್ಲಾ ಶಾಸಕರು ಸಭೆಯಲ್ಲಿ ಭಾಗಿಯಾಗುತ್ತಾರೆ. ಬೆಂಗಳೂರು ಲಾಕ್ ಡೌನ್ ಮಾಡುವ ವಿಚಾರದಲ್ಲಿ ಕೆಲವರು ಲಾಕ್ ಡೌನ್ ಮಾಡಿ ಎಂದು ಹೇಳಿದರೇ ಇನ್ನೂ ಕೆಲವರೂ ಬೇಡ ಎಂದು ಹೇಳಿದ್ದಾರೆ. ಆದರೆ ಸಿಎಂ ಯಡಿಯೂರಪ್ಪ ಲಾಕ್ ಡೌನ್ ಮಾಡುವುದಿಲ್ಲ ಎಂದು ಸ್ಪಷ್ಟ ಪಡಿಸಿದ ನಂತರ ಶಾಸಕರು ಯಾವ ನಡೆ ಅನುಸರಿಸುತ್ತಾರೆ ಎಂಬುದು ಸಭೆಯ ನಂತರ ತಿಳಿಯುತ್ತದೆ.
ಬಹಳ ಪ್ರಮುಖವಾಗಿ ಇಂದು ನಡೆಯುವ ಸಭೆಯಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವೇದಿಕೆ ಮಾಡಿಕೊಳ್ಳಲು ಕಾಂಗ್ರೆಸ್ ನಾಯಕರು ಸಿದ್ದವಾಗಿದ್ದರೆ. ಆದರೆ ಮುಖ್ಯಮಂತ್ರಿ ಬಿ,ಎಸ್, ಯಡಿಯೂರಪ್ಪ ಎಲ್ಲರೂ ಸಹಕರಿಸಿ ಎಂದು ಮನವಿ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.








