ಕಾರಿಗೆ ಯಾವುದೇ ಪ್ರಾಣ ಅಡ್ಡ ಬಂದ ಪರಿಣಾಮ ಅದನ್ನು ತಪ್ಪಿಸಲು ಹೋಗಿ ಕಾರು ಪಲ್ಟಿಯಾಗಿ ಐವರು ಸಾವನ್ನಪ್ಪಿರುವ ಘಟನೆ ಹರ್ಯಾಣದ ಕುರುಕ್ಷೇತ್ರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್) 152ರಲ್ಲಿ ನಡೆದಿದೆ.
ಅಲ್ಲದೇ, ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಪಲ್ಟಿಯಾಗಿ ನಂತರ ಸ್ಕಾರ್ಪಿಯೋಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ಸಾವನ್ನಪ್ಪಿದ್ದಾರೆ. ಯುವಕನೊಬ್ಬ ತೀವ್ರವಾಗಿ ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಎರಡೂ ವಾಹನಗಳು ಜಖಂ ಆಗಿವೆ. ಕಾರು ವೇಗವಾಗಿ ಚಲಿಸುತ್ತಿದ್ದ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಒಂದು ಪ್ರಾಣಿ ಕಾರಿನ ಮುಂದೆ ಕಾಣಿಸಿಕೊಂಡಿದೆ. ಅದನ್ನು ರಕ್ಷಿಸುವ ಯತ್ನದಲ್ಲಿ ಚಾಲಕ ಕಾರನ್ನು ಇನ್ನೊಂದು ಬದಿಗೆ ತಿರುಗಿಸಿದ್ದಾನೆ. ಆಗ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದು, ಇನ್ನೊಂದು ಬದಿಗೆ ಬರುತ್ತಿದ್ದ ಸ್ಕಾರ್ಪಿಯೋಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕಾಗಮಿಸಿ ಪೊಲೀಸರು ಜನರ ಸಹಾಯದಿಂದ ಮೃತ ದೇಹಗಳನ್ನು ಹೊರತೆಗೆದಿದ್ದಾರೆ. ಗಾಯಗೊಂವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.








