ಔಷಧ ಘಟಕದಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 7 ಜನ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.
ಘಟಕದಲ್ಲಿನ ರಿಯಾಕ್ಟರ್ ಸ್ಫೋಟಗೊಂಡ ಪರಿಣಾಮ ಈ ಘಟನೆ ನಡೆದಿದೆ. ಅಲ್ಲದೇ, 30 ಜನ ಗಾಯಗೊಂಡಿದ್ದು, ಇನ್ನೂ ಹಲವರು ಸಿಕ್ಕಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯ ಮುಂದುವರೆಸಿದ್ದಾರೆ. ಸಾವನ್ನಪ್ಪಿದವರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದ್ದು, ಸ್ಫೋಟದ ಸಂದರ್ಭದಲ್ಲಿ ಸುಮಾರು 50 ಜನ ಘಟಕದಲ್ಲಿ ಇದ್ದರು ಎನ್ನಲಾಗಿದೆ. ಸ್ಫೋಟದಿಂದಾಗಿಯೇ ಅದರ ಆಸುಪಾಸಿನಲ್ಲಿ ಕೆಲಸ ಮಾಡುತ್ತಿದ್ದವರು ಕುಸಿದು ಬಿದ್ದಿದ್ದಾರೆ. ಪರಿಣಾಮ 7 ಜನ ಸಾವನ್ನಪ್ಪಿದ್ದು, ಹಲವರು ಕಾಣೆಯಾಗಿದ್ದಾರೆ.
ಔಷಧ ಕಂಪನಿಯಲ್ಲಿನ ರಿಯಾಕ್ಟರ್ನಲ್ಲಿ ಸ್ಫೋಟ ಸಂಭವಿಸಿದೆ ಮತ್ತು ಸ್ಫೋಟದ ಪ್ರಭಾವದಿಂದಾಗಿ ಅಲ್ಲೇ ಆಸುಪಾಸಿನಲ್ಲಿ ಕೆಲಸ ಮಾಡುತ್ತಿದ್ದವರು ಕುಸಿದುಬಿದ್ದಿದ್ದಾರೆ. 7 ಮಂದಿ ಸಾವನ್ನಪ್ಪಿರುವ ಕುರಿತು ವರದಿಯಾಗಿದೆ. ಸುತ್ತಮುತ್ತಲಿನ ಪ್ರದೇಶಗಳ ಜನರನ್ನು ಸ್ಥಳಾಂತರಿಸಲು ಅಧಿಕಾರಿಗಳು ಸೂಚಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರಲ್ಲಿ ಬಿಹಾರ ನಾಲ್ವರು ಕಾರ್ಮಿಕರು ಇದ್ದರು ಎನ್ನಲಾಗಿದೆ. 30 ಜನರ ಸ್ಥಿತಿ ಕೂಡ ಚಿಂತಾಜನಕವಾಗಿದೆ ಎನ್ನಲಾಗಿದೆ.