ರಾಯ್‌ಪುರ: ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, 6 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ಛತ್ತೀಸ್‌ಗಢದ (Chhattisgarh) ಬೆಮೆತಾರಾ ಜಿಲ್ಲೆಯಲ್ಲಿ ನಡೆದಿದೆ. ಬೆರ್ಲಾ ಡೆವಲಪ್‌ಮೆಂಟ್ ಬ್ಲಾಕ್ ನ ಪಿರ್ದಾ ಗ್ರಾಮದ ಬಳಿ ಇರುವ ಘಟಕದಲ್ಲಿ ಈ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಕೂಡಲೇ ಪೊಲೀಸ್ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ತೆರಳಿವೆ.
ಗಾಯಾಳುಗಳನ್ನು ರಾಯ್‌ಪುರದ ಡಾ.ಬಿ.ಆರ್. ಅಂಬೇಡ್ಕರ್ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟ ಸಂಭವಿಸಿದಾಗ ಕನಿಷ್ಠ 100 ಜನ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಇನ್ನೂ ಹಲವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಸಂಭವವಿದೆ. ಸದ್ಯ ರಕ್ಷಣಾ ಕಾರ್ಯಗಳು ನಡೆಯುತ್ತಿವೆ.