ಬೆಂಗಳೂರು: ಅಕ್ರಮ ಸಕ್ರಮ ಕುರಿತಂತೆ ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯುತ್ತಿದ್ದು, ಕಂದಾಯ ಇಲಾಖೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಅಕ್ರಮ ಸಕ್ರಮದ ಕುರಿತು ಚರ್ಚೆ ನಡೆಸಲಾಗ್ತಿದೆ. ಈ ಹಿಂದೆ ಅಕ್ರಮ ಸಕ್ರಮದ ಕುರಿತಂತೆ ಸಂಪುಟ ಉಪಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದ್ದ ವರದಿ ಬಗ್ಗೆಯೂ ಸಭೆಯಲ್ಲಿ ಸಮಾಲೋಚನೆ ನಡೆಸಲಾಗ್ತಿದೆ.
ಇನ್ನು ಸಭೆಯಲ್ಲಿ ಡಿಸಿಎಂ ಅಶ್ವತ್ ನಾರಾಯಣ್, ಕಂದಾಯ ಸಚಿವ ಆರ್.ಅಶೋಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ಬಿಬಿಎಂಪಿ, ಬಿಡಿಎ ಆಯುಕ್ತರು ಭಾಗವಹಿಸಿದ್ದಾರೆ.








