ನಿಲ್ಲದ ಕೊರೊನಾ ಓಟ; ಮತ್ತೆ 5172 ಮಂದಿಗೆ ಪಾಸಿಟಿವ್, 98 ಬಲಿ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕೊರೊನಾ ನಾಗಾಲೋಟ ಮುಂದುವರೆದಿದೆ.
ಇಂದು ರಾಜ್ಯದಲ್ಲಿ 5172 ಮಂದಿ ಕೊರೊನಾ ಪಾಸಿಟಿವ್ ಬಂದಿದ್ದು, 98 ಜನರನ್ನು ಬಲಿ ಪಡೆದುಕೊಂಡಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1 ಲಕ್ಷದ 29,287ಕ್ಕೆ ಏರಿಕೆಯಾಗಿದ್ದರೆ, ಮೃತರ ಸಂಖ್ಯೆ 2412ಕ್ಕೆ ಬಂದಿದೆ.
ರಾಜ್ಯದ ವಿವಿಧ ಕೋವಿಡ್ ಆಸ್ಪತ್ರೆಗಳಿಂದ 3860 ಮಂದಿ ಡಿಶ್ಚಾರ್ಜ್ ಆಗಿದ್ದು, ಇಲ್ಲಿಯವರೆಗೆ 53,648 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
73,219 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ 602 ಮಂದಿ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು ಐಸಿಯುಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 1852 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, 27 ಮಂದಿ ಉಸಿರು ಚೆಲ್ಲಿದ್ದಾರೆ. ನಗರದಲ್ಲಿ ಕೊರೊನಾ ಸೋಂಕಿತ ಸಂಖ್ಯೆ 57,396ಕ್ಕೆ ಏರಿಕೆಯಾಗಿದ್ದು, 37,760 ಸಕ್ರಿಯ ಪ್ರಕರಣಗಳಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಾಂಸ್ಕøತಿಕ ರಾಜಧಾನಿ ಮೈಸೂರಿನಲ್ಲಿ ಕೊರೊನಾ ಸ್ಫೋಟ ಮುಂದುವರೆದಿದೆ. ಇಂದು 365 ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಇಂದು 9 ಮಂದಿ ಬಲಿಯಾಗುವುದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 151 ಮಂದಿ ಬಲಿಯಾಗಿದ್ದಾರೆ. ಬಳ್ಳಾರಿಯಲ್ಲಿ ಕೊರೊನಾ ಓಟ ಮುಂದುವರೆದಿದ್ದು, 269 ಮಂದಿಗೆ ಪಾಸಿಟಿವ್ ಬಂದಿದೆ. ಕಲಬುರಗಿಯಲ್ಲಿ 219, ಬೆಳಗಾವಿ 219, ಧಾರವಾಡ 184, ಹಾಸನ 146, ದಕ್ಷಿಣ ಕನ್ನಡ 139, ಉಡುಪಿ 136, ಬಾಗಲಕೋಟೆ 134, ವಿಜಯಪುರ 129, ಶಿವಮೊಗ್ಗ 119 ಹಾಗೂ ದಾವಣಗೆರೆಯಲ್ಲಿ 108 ಮಂದಿಗೆ ಕೊರೊನಾ ವಕ್ಕರಿಸಿದೆ.

Leave a Reply

Your email address will not be published. Required fields are marked *

Recent Posts

YOU MUST READ

Pin It on Pinterest

Share This