ವೈದ್ಯರ ನಿರ್ಲಕ್ಷ್ಯದಿಂದಾಗಿ ಮಹಿಳೆ ಸಾವು – ಆಸ್ಪತ್ರೆಯ ಮುಂದೆ ಶವವಿಟ್ಟು ಪ್ರತಿಭಟನೆ
ವೈದ್ಯರ ನಿರ್ಲಕ್ಷ್ಯದಿಂದಾಗಿ ಮಹಿಳೆಯೋರ್ವಳು ಪ್ರಾಣಾ ಕಳೆದುಕೊಂಡ ಘಟನೆ ಕಲ್ಬುರ್ಗಿಯಲ್ಲಿ ನಡೆದಿದೆ. ಜೀವ ತುಂಬಬೇಕಾದ ವೈದ್ಯರೇ ಇಲ್ಲಿ ಜೀವ ತೆಗೆದ ಆರೋಪ ಕೇಳಿಬಂದಿದೆ. ಕಲಬುರ್ಗಿ ನಗರದ ಕರುಣೇಶ್ವರ ಕಾಲೋನಿಯಲ್ಲಿರುವ ಸಂಜನಾ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಅಂತಾ ಕುಟಂಬಸ್ಥರು ಆರೋಪಿಸಿದ್ದಾರೆ. ಆಸ್ಪತ್ರೆಯ ಮುಂಭಾಗ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ.
ಒಂದು ವಾರದ ಹಿಂದೆ ಇಟಗಾ ಗ್ರಾಮದ ನಾಗಮ್ಮ ಎಂಬಾಕೆ ಗರ್ಭಕೋಶದ ಸಮಸ್ಯೆಯಿಂದ ಡಾ. ಎ.ಪಿ. ಜಂಪಾ ಅವರ ಸಂಜನಾ ಆಸ್ಪತ್ರೆಗೆ ದಾಖಲಾಗಿದ್ರು, ನಾಗಮ್ಮಗೆ ಶಸ್ತ್ರ ಚಿಕಿತ್ಸೆಯೂ ನಡೆದಿತ್ತು. ಶಸ್ತ್ರ ಚಿಕಿತ್ಸೆ ಬಳಿಕ ರೋಗ ಮತ್ತಷ್ಟು ಉಲ್ಬಣಗೊಂಡಿದೆ. ಹೀಗಾಗಿ ಮತ್ತೆ ಡಾ. ಜಂಪಾ ಮತ್ತೊಮ್ಮೆ ಶಸ್ತ್ರ ಚಿಕಿತ್ಸೆ ಮಾಡಿದ್ರು. ಈ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಈ ಸಾವಿಗೆ ವೈದ್ಯರೆ ಕಾರಣ ಆಂತ ಕುಟುಂಬಸ್ಥರು ಆರೋಪಿಸಿದ್ದಾರೆ.
ಆದರೆ ಈ ಆರೋಪವನ್ನ ಡಾ ಎ ಪಿ ಜಂಪಾ ಅಲ್ಲಗಳೆದಿದ್ದಾರೆ ನಮ್ಮ ಪ್ರಯತ್ನ ನಾವು ಮಾಡಿದ್ದೇವೆ ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ…








