ಬೆಂಗಳೂರು: ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಒತ್ತಾಯಿಸಿ ಗುರುವಾರ ವಿಧಾನಸೌಧವರೆಗೆ ಕಾಲ್ನಡಿಗೆ ಜಾಥಾ ನಡೆಸಿದ್ದ ರಾಜ್ಯದ ಲಕ್ಷಾಂತರ ಸಾರಿಗೆ ನೌಕರರು, ಇಂದು ಮುಷ್ಕರಕ್ಕೆ ನಿರ್ಧರಿಸಿದ್ದಾರೆ.
ತಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಒತ್ತಾಯಿಸಿ ಗುರುವಾರ ನಡೆಸಿದ ಪ್ರತಿಭಟನೆ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನಮ್ಮ ಬೇಡಿಕೆಗಳನ್ನು ಆಲಿಸುವ ಸೌಜನ್ಯವನ್ನೂ ಅಧಿಕಾರಿಗಳು ಮಾಡಿಲ್ಲ. ಹೀಗಾಗಿ ಇಂದೂ ಕೂಡ ಕರ್ತವ್ಯಕ್ಕೆ ಗೈರು ಹಾಜರಾಗಿ ಮುಷ್ಕರ ನಡೆಸುವಾಗಿ ಸಾರಿಗೆ ನೌಕರರ ಸಂಘಟನೆಗಳು ತಿಳಿಸಿವೆ.

ನಾಳೆ ಯಾವ ಡ್ರೈವರ್ ಹಾಗೂ ನಿರ್ವಾಹಕರು ಬಸ್ ಹತ್ತದಂತೆ ತಡೆಯುತ್ತೇವೆ. ಒಂದು ವೇಳೆ ಬಸ್ ಓಡಿಸಲು ಮುಂದಾದರೆ ನಿಲ್ಲಿಸುತ್ತೇವೆ ಎಂದು ಬಿಎಂಟಿಸಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ್ ತಿಳಿಸಿದ್ದಾರೆ.
ಸಾರಿಗೆ ನೌಕರರ ಮುಷ್ಕರದ ನಿರ್ಧಾರದ ಹಿನ್ನೆಲೆಯಲ್ಲಿ ಇಂದು ರಾಜ್ಯಾದ್ಯಂತ ಕೆಎಸ್‍ಆರ್‍ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ, ಈಶಾನ್ಯ ಸಾರಿಗೆ ಬಸ್‍ಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಬಸ್‍ಗಳಲ್ಲೇ ದೂರದ ಊರುಗಳಿಗೆ, ಕಚೇರಿ, ಆಸ್ಪತ್ರೆ ಹಾಗೂ ಫ್ಯಾಕ್ಟರಿಗಳಿಗೆ ತೆರಳಬೇಕಿರುವ ನೌಕರರಿಗೆ ಸಾರಿಗೆ ನೌಕರರ ಮುಷ್ಕರದ ಬಿಸಿ ತಟ್ಟಲಿದೆ.
ಇಂದಿನಿಂದ ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ
ಸಾರಿಗೆ ನೌಕರರು ಶ್ರಮ ಜೀವಿಗಳು, ಚಾಲಕರು, ನಿರ್ವಾಕರು, ಮೆಕ್ಯಾನಿಕ್‍ಗಳು ತಮ್ಮ ಬೇಡಿಕೆ ಈಡೇರಿಸುವಂತೆ ಜಾಥಾ ನಡೆಸಿ ಸರ್ಕಾರದ ಪ್ರತಿಕ್ರಿಯೆಗಾಗಿ ಕಾದು ಕುಳಿತಿದ್ದರು. ಆದರೆ, ಸರ್ಕಾರದ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಇಂದು ಬೆಳಿಗ್ಗೆ 6 ಗಂಟೆಯಿಂದ ಕೆಎಸ್‍ಆರ್‍ಟಿಸಿ ಸೇರಿದಂತೆ ಎಲ್ಲಾ ನಾಲ್ಕು ನಿಗಮಗಳ ಸಾರಿಗೆ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಲಿದ್ದಾರೆ. ಸಾರಿಗೆ ನೌಕರರ ಮುಷ್ಕರಕ್ಕೆ ರೈತ ಸಂಘಟನೆಗಳು ಬೆಂಬಲ ನೀಡಲಿವೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.
ಬಸ್ ಸಂಚಾರ ಸ್ಥಗಿತ ಇಲ್ಲ, ಪರ್ಯಾಯ ವ್ಯವಸ್ಥೆ ಮಾಡಿದ್ದೇವೆ
ಸಾರಿಗೆ ನೌಕರರು ಮುಷ್ಕರ ನಡೆಸಿದರೂ ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಸೇರಿದಂತೆ ಸರ್ಕಾರಿ ಬಸ್‍ಗಳ ಸೇವೆಯಲ್ಲಿ ವ್ಯತ್ಯಯ ಆಗುವುದಿಲ್ಲ. ಪ್ರಯಾಣಿಕರ ಅನುಕೂಲಕ್ಕಾಗಿ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ಕೆಎಸ್‍ಆರ್‍ಟಿಸಿ ಎಂಡಿ ಶಿವಯೋಗಿ ಕಳಸದ್, ಬಿಎಂಟಿಸಿ ಎಂಡಿ ಸಿ.ಶಿಖಾ ಸ್ಪಷ್ಟನೆ ನೀಡಿದ್ದಾರೆ.
ಎಐಟಿಯುಸಿ ಸೇರಿದಂತೆ ಕೆಲ ಸಾರಿಗೆ ನೌಕರರ ಸಂಘಟನೆಗಳು ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿಲ್ಲ. ಹೀಗಾಗಿ ಈ ಸಂಘಟನೆಗಳ ಸದಸ್ಯರಾಗಿರುವ ಸಾರಿಗೆ ನೌಕರರು ಬಸ್ ಸಂಚಾರ ನಡೆಸಲಿದ್ದಾರೆ. ಹೀಗಾಗಿ ಸಾರಿಗೆ ನೌಕರರ ಸಂಘಟನೆಗಳ ನಡುವಿನ ಭಿನ್ನಮತ ಸಂಘರ್ಷಕ್ಕೆ ದಾರಿ ಮಾಡಿಕೊಡುತ್ತಾ ಎಂಬುದನ್ನು ಕಾದು ನೋಡಬೇಕಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








