ಬೆಂಗಳೂರು : ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರದ ಭೂಮಿಪೂಜೆಗೆ ಆಗಮಿಸುವಂತೆ ಆದಿಚುಂಚನಗಿರಿ ಕ್ಷೇತ್ರದ ಮಠಾಧೀಶರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರಿಗೆ ಆಹ್ವಾನ ನೀಡಲಾಗಿದೆ.
ವಿಶ್ವ ಹಿಂದೂ ಪರಿಷತ್ ನ ವಿವಿಧ ಮುಖಂಡರು ಹಾಗೂ ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಪದಾಧಿಕಾರಿಗಳು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳು ಅಯೋಧ್ಯೆ ರಾಮಮಂದಿರದ ಭೂಮಿ ಪೂಜೆಗೆ ಆಗಮಿಸಬೇಕೆಂದು ಆಹ್ವಾನಿಸಿದ್ದು, ಇದಕ್ಕೆ ಶ್ರೀಗಳು ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶಿಲಾನ್ಯಾಸ ಮಾಡಲಿದ್ದಾರೆ. ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ರಾಜ್ಯದಿಂದಲೂ ಹಲವು ಸ್ವಾಮೀಜಿಗಳು, ಸಂಘ-ಪರಿವಾರದ ಮುಖಂಡರು ಭಾಗವಹಿಸಲಿದ್ದಾರೆ.