ಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ್ದ ವಿದ್ಯಾರ್ಥಿನಿಗೆ ಐಫೋನ್ ಉಡುಗೊರೆ Saaksha Tv
ಮಂಡ್ಯ: ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ್ದ ವಿದ್ಯಾರ್ಥಿನಿಗೆ ಮಹಾರಾಷ್ಟ್ರದ ಕಾಂಗ್ರೇಸ್ ಶಾಸಕ ಜೀಶನ್ ಸಿದ್ದಿಕ್ ಅವರು ಐಫೋನ್, ಸ್ಮಾರ್ಟ್ ವಾಚ್ ಉಡುಗೊರೆ ನೀಡಿದ್ದಾರೆ.
ವಿದ್ಯಾರ್ಥನಿ ಮುಸ್ಕಾನ್ ಅಲ್ಲಾಹು ಅಕ್ಬರ್ ಅಂತ ಘೋಷಣೆ ಕೂಗಿದ್ದಕ್ಕೆ ಅವರಿಗೆ ಜಮಾತ್ ಒಂದು 5 ಲಕ್ಷ ಹಣ ನೀಡಿತ್ತು. ಈಗ ಮಹಾರಾಷ್ಟ್ರ ರಾಜ್ಯದ ಬಾಂದ್ರಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಜೀಶನ್ ಸಿದ್ದಿಕ್ ದುಬಾರಿ ಬೆಲೆಯ ಉಡುಗೊರೆಯನ್ನು ನೀಡಿದ್ದಾರೆ.
ಮಂಡ್ಯದ ಗುತ್ತಲು ಬಡಾವಣೆಯಲ್ಲಿರುವ ಮುಸ್ಕಾನ್ ಮನೆಗೆ ಭೇಟಿಕೊಟ್ಟ ಜೀಶನ್ ಸಿದ್ದಿಕ್ ಮುಸ್ಕಾನ್ ಅವರಿಗೆ ಐಫೋನ್, ಸ್ಮಾರ್ಟ್ ವಾಚ್ ನ್ನು ಉಡುಗೊರೆಯಾಗಿ ನೀಡಿದ್ದಾರೆ. ಹಾಗೇ ಕುಟುಂಬಸ್ಥರಿಗೆ ಧೈರ್ಯ ಹೇಳಿ, ಅವರ ಜೊತೆ ಇರುವ ಭರವಸೆ ನೀಡಿದರು.
ನಂತರ ಮಾತನಾಡಿದ ಶಾಸಕ, ಈ ಬಗ್ಗೆ ನನಗೆ ಮಾಧ್ಯಮಗಳಿಂದ ಗೊತ್ತಾಯ್ತು. ಆಗ ಬಹಳ ಗರ್ವ ಅನಿಸಿತು. ಅಷ್ಟು ಜನ ಎದುರಿದ್ದರೂ ವಿದ್ಯಾರ್ಥಿನಿ ಅಲ್ಲಾ ಹು ಅಕ್ಬರ್ ಅಂತಾ ಕೂಗಿದ್ದಾರೆ. ಹಿಜಾಬ್ ಹಾಕಿಕೊಳ್ಳೋದು ಅವರ ಹಕ್ಕು.
ಅವರ ಹಕ್ಕಿನ ಬಗ್ಗೆ ಧೈರ್ಯದಿಂದ ದನಿ ಎತ್ತಿದ್ದಾರೆ. ಮಂಡ್ಯದಿಂದ ಇಂಡಿಯಾವರೆಗೂ ಆಕೆ ಬಗ್ಗೆ ಜನರು ಹೆಮ್ಮೆ ಪಡುತ್ತಿದ್ದಾರೆ. ಎಲ್ಲಾ ಮಹಿಳೆಯರು ಈ ವಿದ್ಯಾರ್ಥಿನಿ ರೀತಿ ಧೈರ್ಯದಿಂದ









