ಚಿಕ್ಕಮಗಳೂರು: ಮೂವರನ್ನು ಬಲಿ ಪಡೆದಿದ್ದ ಒಂಟಿ ಸಲಗ ಸೆರೆ ಹಿಡಿಯುವಂತೆ ಆದೇಶ ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ ಎರಡು ಕಾಡಾನೆಗಳ (Wild Elephant) ಸೆರೆಗೆ ಅರಣ್ಯ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಒಂಟಿ ಸಲಗ ಸೇರಿದಂತೆ 2 ಕಾಡಾನೆ ಸೆರೆಗೆ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ನಿರಂತರ ಕಾಡಾನೆ ದಾಳಿಯಿಂದ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ (Mudigere) ಜನರು ಭಯದಿಂದ ಜೀವನ ಸಾಗಿಸುತ್ತಿದ್ದರು. ಹೀಗಾಗಿ ಜನರು ಆಕ್ರೋಶ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ಪುಂಡಾನೆಗಳನ್ನು ಸೆರೆಹಿಡಿದು ರೆಡಿಯೋ ಕಾಲರಿಂಗ್ (Radio Collaring) ಅಳವಡಿಸಲು ಸೂಚಿಸಲಾಗಿದೆ. ಹಿಡಿದ ನಂತರ ಭದ್ರಾ ಸಂರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲು ಆದೇಶಿಸಲಾಗಿದೆ. ಸಾಕಾನೆಗಳ ಮೂಲಕ ಒಂಟಿ ಸಲಗ ಸೆರೆಹಿಡಿಯುವ ಕಾರ್ಯಾಚರಣೆ ನಡೆಸಲಾಗುತ್ತಿದೆ.








