ಬಸ್ ಪಲ್ಟಿಯಾದ ಪರಿಣಾಮ ಕೆಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ದೆಹಲಿಯ ಕೆಎನ್ ಕಾಟ್ಜು ಮಾರ್ಗ ಪೊಲೀಸ್ ಠಾಣೆ ವ್ಯಾಪ್ತಿಯ ರೋಹಿಣಿ ಸೆಕ್ಟರ್ 15 ರಲ್ಲಿ ನಡೆದಿದೆ. ಪಲ್ಟಿಯಾದ ಬಸ್ ಎಲೆಕ್ಟ್ರಿಕ್ ಬಸ್ ಎನ್ನಲಾಗಿದ್ದು, ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡ ಪ್ರಯಾಣಿಕರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಲ್ಲಿ ಎಲೆಕ್ಟ್ರಿಕ್ ಬಸ್ ನ ಮುಂಭಾಗದ ಗಾಜು ಸಂಪೂರ್ಣವಾಗಿ ಹಾನಿಯಾಗಿದೆ. ಆದರೆ, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.