ಹಾವೇರಿ : ಖಾಸಗಿ ಬಸ್ ವೊಂದು ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲಲೆಯಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬ್ಯಾಡಗಿ (Byadagi) ಹತ್ತಿರದ ಮೊಟೇಬೆನ್ನೂರಿನಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ.
ಘಟನೆಯಲ್ಲಿ ಚಾಲಕ ಕೂಡ ಸಾವನ್ನಪ್ಪಿದ್ದು, ಸದಾನಂದ (50) ಎಂದು ಗುರುತಿಸಲಾಗಿದೆ. ಅಲ್ಲದೇ ಓರ್ವ ಪ್ರಯಾಣಿಕ ಸಹ ಸಾವನ್ನಪ್ಪಿದ್ದಾರೆ. ಅಲ್ಲದೇ, ಘಟನೆಯಲ್ಲಿ 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹಾವೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಈ ಬಸ್ ಬೆಂಗಳೂರಿನಿಂದ ಮೀರಜ್ ಗೆ ತೆರಳುತ್ತಿತ್ತು. ಆದರೆ, ಚಾಲಕ ನಿಯಂತ್ರಣ ಕಳೆದುಕೊಂಡಿದ್ದರಿಂದಾಗಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಬ್ಯಾಡಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ








