ಕೇಂದ್ರ ಬಜೆಟ್ ಗೆ ಆನಂದ ಮಹಿಂದ್ರಾ ಮೆಚ್ಚುಗೆ Saaksha Tv
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2022-23ರ ಬಜೆಟ್‍ಗೆ ಉದ್ಯಮಿ, ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಂಕ್ಷಿಪ್ತತೆಯು ಯಾವಾಗಲೂ ಸದ್ಗುಣವಾಗಿದೆ. ನಿರ್ಮಲಾ ಸೀತಾರಾಮನ್ ಅವರ ಚಿಕ್ಕ ಬಜೆಟ್ ಅತ್ಯಂತ ಪ್ರಭಾವಶಾಲಿಯಾಗಿದೆ ಎಂದು ಸಾಬೀತುಪಡಿಸಬಹುದಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
2022-23ನೇ ಸಾಲಿನ ಬಜೆಟ್ ನಲ್ಲಿ ಪ್ರಧಾನಿ ಗತಿಶಕ್ತಿ ಯೋಜನೆ, ಎಲ್ಲರನ್ನು ಒಳಗೊಳ್ಳುವ ಅಭಿವೃದ್ಧಿ, ಅಭಿವೃದ್ಧಿ ಆಧಾರಿತ ಹೂಡಿಕೆ, ಉದ್ಯಮಕ್ಕೆ ಆರ್ಥಿಕ ಉತ್ತೇಜನ ಹೀಗೆ ನಾಲ್ಕು ಸೂತ್ರಗಳನ್ನು ಬಜೆಟ್ ಒಳಗೊಂಡಿತ್ತು. ಈ ಬಜೆಟ್ ನಾಲ್ಕು ಸೂತ್ರಗಳನ್ನು ಆಧರಿಸಿದೆ. ಏಳು ವಲಯಗಳನ್ನು ದೃಷ್ಟಿಯಲ್ಲಿ ಇರಿಸಿಕೊಂಡು ಬಜೆಟ್ ರೂಪಿಸಲಾಗಿದೆ ಎಂಬುದನ್ನು ಆರಂಭದಲ್ಲಿಯೇ ವಿತ್ತ ಸಚಿವರು ಹೇಳಿದ್ದರು.
ಗ್ರಾಮೀಣ ಮಕ್ಕಳಿಗೆ ವನ್ ಕ್ಲಾಸ್ ವನ್ ಟಿವಿ, ಕೆನ್ ಬೆಟ್ಟಾ ನದಿ ಜೋಡಣೆ ಯೋಜನೆ, ಪಿಎಂ ಆವಾಸ್ ಯೋಜನೆಯಡಿ 80 ಲಕ್ಷ ಮನೆ ನಿರ್ಮಾಣ, ಜಿಎಸ್‍ಟಿ ಸಂಗ್ರಹ, 75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆ ಹೀಗೆ ಹಲವು ಯೋಜನೆಗಳನ್ನು ಕೇಂದ್ರ ಬಜೆಟ್ ಒಳಗೊಂಡಿತ್ತು.









