ಕಾಂಗ್ರೆಸ್ ಗೆ ಮತ್ತೊಬ್ಬ ನಾಯಕ ರಾಜಿನಾಮೆ – ಪಕ್ಷದ ಹುದ್ದೆ ತ್ಯಜಿಸಿದ ಆನಂದ ಶರ್ಮಾ..
ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ. ಜಿ 23 ಗುಂಪಿನ ಸದಸ್ಯ ಮತ್ತೊಬ್ಬ ಹಿರಿಯ ನಾಯಕ ಆನಂದ್ ಶರ್ಮಾ ಹಿಮಾಚಲ ಕಾಂಗ್ರೆಸ್ ಸ್ಟೀರಿಂಗ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿದರು.
ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಪತ್ರ ಬರೆದಿರುವ ಶರ್ಮಾ ಅವರು ಪ್ರಮುಖ ಚುನಾವಣಾ ಕಾರ್ಯತಂತ್ರದ ಸಭೆಗಳು ಮತ್ತು ಚುನಾವಣೆಗೆ ಒಳಪಡುವ ರಾಜ್ಯಗಳಿಗೆ ಸಂಬಂಧಿಸಿದ ನಿರ್ಧಾರಗಳಲ್ಲಿ ತಮ್ಮನ್ನು ಕಡೆಗಣಿಸಲಾಗಿದೆ ಎಂದು ಬರೆದಿದ್ದಾರೆ.
ಈ ಕುರಿತಂತೆ ಮಾಧ್ಯಮಗಳಿಗೂ ಮಾಹಿತಿ ನೀಡಿರುವ ಆನಂದ್ ಶರ್ಮಾ, ಪಕ್ಷದ ಹಿಮಾಚಲ ಪ್ರದೇಶ (Himachal Pradesh)ಘಟಕದ ಚಾಲನಾ ಸಮಿತಿ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಆದರೆ ಚುನಾವಣೆಗಳಲ್ಲಿ ಕಾಂಗ್ರೆಸ್ ಪರ ಪ್ರಚಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ನಾಲ್ಕು ದಿನ ಪ್ರವಾಸ ಮುಂದುವರೆಸುವುದಾಗಿ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಪಕ್ಷದ ಪ್ರಮುಖ ಹುದ್ದೆಗೆ ಗುಲಾಂ ನಬಿ ಆಜಾದ್ ರಾಜೀನಾಮೆ ನೀಡಿದ ಬೆನ್ನಲ್ಲೇ ಶರ್ಮಾ ಈ ನಿರ್ಧಾರ ಪ್ರಕಟಿಸಿರುವುದು ಅಚ್ಚರಿಗೆ ಕಾರಣವಾಗಿದೆ.