ಕೆಲವೇ ಕ್ಷಣಗಳಲ್ಲಿ ಆನಂದ್ ಸಿಂಗ್ ಸುದ್ದಿಗೋಷ್ಠಿ : ರಾಜೀನಾಮೆ ಘೋಷಣೆ ಸಾಧ್ಯತೆ
ಬೆಂಗಳೂರು : ಕೇಳಿದ ಖಾತೆ ಸಿಗದೇ ಇರೋದ್ದಕ್ಕೆ ಸರ್ಕಾರದ ವಿರುದ್ಧ ಸಿಡಿದಿರುವ ಸಚಿವ ಆನಂದ್ ಸಿಂಗ್ ಇದೀಗ ಮಹತ್ತರ ಸುದ್ದಿಗೋಷ್ಠಿ ಕರೆದಿದ್ದಾರೆ.
ಅವರು ಕೆಲವೇ ಕ್ಷಣಗಳಲ್ಲಿ ಮಹತ್ವದ ಸುದ್ಧಿಗೋಷ್ಠಿ ನಡೆಸಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಈ ವೇಳೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನಿರ್ಧಾರವನ್ನು ಘೋಷಿಸುತ್ತಾರಾ ಎಂಬ ತೀವ್ರ ಕುತೂಹಲವನ್ನು ಹುಟ್ಟಿಸಿದೆ.

ಖಾತೆ ಹಂಚಿಕೆ ಬೆನ್ನಲ್ಲೆ ಆನಂದ್ ಸಿಂಗ್ ತಮ್ಮ ಅಸಮಾಧಾನ ಹೊರಹಾಕಿದ್ದರು. ಖಾತೆ ಬದಲಿಸಿ ಕೊಡದಿದ್ದಲ್ಲಿ ರಾಜೀನಾಮೆ ಎಚ್ಚರಿಕೆ ನೀಡಿದ್ದರು.
ಆದ್ರೆ ಈ ಬಗ್ಗೆ ಬೊಮ್ಮಾಯಿ ಪ್ರತಿಕ್ರಿಯೆ ನೀಡಿರಲಿಲ್ಲ. ಇದೀಗ ಆನಂದ್ ಸಿಂಗ್ ಸುದ್ದಿಗೋಷ್ಠಿ ಕರೆದಿದ್ದು, ಕುತೂಹಲಕ್ಕೆ ಕಾರಣವಾಗಿದೆ.








