ನೆರೆ ರಾಜ್ಯದ ಜನರಿಂದ ಹೊಸಪೇಟೆಯಲ್ಲಿ ಕೊರೊನಾ ಹೆಚ್ಚಳ ಕಾರಣ

1 min read
anandh singh

ನೆರೆ ರಾಜ್ಯದ ಜನರಿಂದ ಹೊಸಪೇಟೆಯಲ್ಲಿ ಕೊರೊನಾ ಹೆಚ್ಚಳ ಕಾರಣ

ಹೊಸಪೇಟೆ : ಹೊಸಪೇಟೆಗೆ ಬೇರೆ ಬೇರೆ ರಾಜ್ಯಗಳಿಂದ ಜನರು ಆಗಮಿಸುತ್ತಿದ್ದಾರೆ. ಹಾಗಾಗಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ ಎಂದು ಸಚಿವ ಆನಂದ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಹೊಸಪೇಟೆಯಲ್ಲಿ ಕೊರೊನಾ ಪ್ರಕರಣ ಹೆಚ್ಚಳ ಬಗ್ಗೆ ಪ್ರತಿಕ್ರಿಯೆ ನೀಡಿ, ಹೊಸಪೇಟೆಗೆ ಬೇರೆ ಬೇರೆ ರಾಜ್ಯಗಳಿಂದ ಜನರು ಆಗಮಿಸಿದ್ದಾರೆ.

ಹೀಗಾಗಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ ಎಂದು ತಿಳಿಸಿದ್ದಾರೆ. ಅಲ್ಲದೆ ತಾಲೂಕು ಹಾಗೂ ಜಿಲ್ಲಾಡಳಿತ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಿ, ಅಗತ್ಯ ಕ್ರಮ ಕೈಗೊಳ್ಳುತ್ತಿದೆ ಎಂದು ಹೇಳಿದರು.

anandh singh

ಇನ್ನ ಕೊರೊನಾ ಲಸಿಕೆ ಬಗ್ಗೆ ಮಾತನಾಡಿ, ಕೊರೊನಾ ಲಸಿಕೆ ಪಡೆಯುವುದರಿಂದ ರಿಯಾಕ್ಷನ್ ಆಗುವುದಿಲ್ಲ. ಇದಕ್ಕೆ ಯಾರೂ ಕೂಡ ಕಿವಿಕೊಡಬಾರದು. ವ್ಯಾಕ್ಸಿನ್ ಹಾಕಿಸಿಕೊಳ್ಳವ ಮೂಲಕ ಕೋವಿಡ್ ಮುಕ್ತರಾಗಬೇಕು.

ಸಾರ್ವಜನಿಕರು ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಕೊರೊನಾ ಮುಕ್ತರಾಗುವವರೆಗೂ ಜನರು ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಮನವಿ ಮಾಡಿಕೊಂಡರು.

Motera stadium
ಜಾಹೀರಾತು

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd