ನವದೆಹಲಿ : ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಿದ್ದು, ಇದರಲ್ಲಿ ಭಾಗಿಯಾಗಿದ್ದ 17 ಸಂಸದರಿಗೆ ಕೊರೊನಾ ಸೋಂಕಿರುವುದು ದೃಢವಾಗಿದೆ.
ಕೊರೊನಾ ಸೋಂಕಿನ ಹಿನ್ನೆಲೆ ಹಲವಾರು ಮನ್ನೆಚ್ಚೆರಿಕೆ ಕ್ರಮಗಳನ್ನು ತೆಗೆದುಕೊಂಡು ಇಂದು ಸಂಸತ್ ಅಧಿವೇಶನವನ್ನು ಆರಂಭ ಮಾಡಲಾಗಿತ್ತು. ಆದರೆ ಇದರಲ್ಲಿ ಭಾಗವಹಿಸಿದ್ದ ಬಿಜೆಪಿಯ ಮೀನಾಕ್ಷಿ ಲೇಖಿ, ಅನಂತ್ ಕುಮಾರ್ ಹೆಗ್ಡೆ ಮತ್ತು ಪರ್ವೇಶ್ ಸಾಹಿಬ್ ಸಿಂಗ್ ಸೇರಿದಂತೆ 17 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಕೊರೊನಾ ಹಿನ್ನೆಲೆ ಅಧಿವೇಶನದಲ್ಲಿ ಭಾಗವಹಿಸುವ ಸಂಸದರಿಗೆ ಕೊರೊನಾ ಪರೀಕ್ಷೆ ಕಡ್ಡಾಯವಾಗಿದೆ. ಈ ಹಿನ್ನೆಲೆಯಲ್ಲಿ ಸಂಸದರನ್ನು ಪರೀಕ್ಷೆಗೆ ಒಳಪಡಿಸಿದಾಗ ಅನಂತ್ ಕುಮಾರ್ ಹೆಗಡೆ ಸೇರಿದಂತೆ 17 ಮಂದಿಗೆ ಕರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಸಂಸದ ಅನಂತ್ ಕುಮಾರ್ ಕಳೆದ ಶುಕ್ರವಾರ ಅವರು ಹುಬ್ಬಳ್ಳಿಯಿಂದ ದೆಹಲಿಗೆ ವಿಮಾನದ ಮೂಲಕ ತೆರಳಿದ್ದರು. ಅಲ್ಲಿಗೆ ತಲುಪಿದ ಬಳಿಕ ಎನ್ ಐಸಿಪಿಆರ್ ಆಸ್ಪತ್ರೆಯಲ್ಲಿ ತಪಾಸಣೆಗೊಳಪಟ್ಟಿದ್ದರು. ಈ ವೇಳೆ ಅವರಿಗೆ ಸೋಂಕು ಇರುವುದು ದೃಢಪಟ್ಟಿದೆ. ತಮಗೆ ಯಾವುದೇ ರೀತಿಯಲ್ಲಿಯೂ ಸೋಂಕಿನ ಲಕ್ಷಣಗಳು ಇಲ್ಲ. ಆದರೂ ಪಾಸಿಟಿವ್ ಬಂದಿದೆ ಎಂದು ಅನಂತ್ ಕುಮಾರ್ ಹೇಳಿದ್ದಾರೆ.