ಐಷಾರಾಮಿ ಜೀವನಕ್ಕಾಗಿ ದರೋಡೆ ಮಾಡುತ್ತಿದ್ದ ಖದೀಮನನ್ನು ಪೊಲೀಸರು ಜೈಲಿಗೆ ಅಟ್ಟಿದ್ದಾರೆ.
ಹೊಸಕೋಟೆಯ ವ್ಯಾಪ್ತಿಯಲ್ಲಿ ಮನೆ ಮುಂದೆ ಹಾಗೂ ಪ್ಲೈ ಒವರ್ ಕೆಳಗಡೆ ನಿಲ್ಲಿಸಿ ಹೋಗುತ್ತಿದ್ದ ಬೈಕ್ ಗಳನ್ನ ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ.
ಬೈಕ್ಗಳು ಖದೀಯಲು ಸಾದ್ಯವಾಗದಿದ್ದಾಗ ಬಸ್ಟ್ಯಾಂಡ್ ನಲ್ಲಿ ಹಾಗೂ ಒಂಟಿಯಾಗಿ ಓಡಾಡುವ ಜನರ ಹತ್ತಿರ ಮೊಬೈಲ್ಗಳನ್ನ ಕಿತ್ತು ಪರಾರಿಯಾಗುತ್ತಿದ್ದರು ಎನ್ನಲಾಗಿದ್ದು, ಸದ್ಯ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಬಂಧಿತರಿಂದ 10 ಲಕ್ಷ ರೂ. ಮೌಲ್ಯದ ವಿವಿಧ ಕಂಪನಿಗಳ 9 ದ್ವಿ ಚಕ್ರವಾಹನಗಳು 12 ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ.