ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಕಾರ್ಯಕರ್ತೆ Saaksha Tv
ತುಮಕೂರು: ಡೆತ್ ನೋಟ್ ಬರೆದಿಟ್ಟು ಅಂಗನವಾಡಿ ಕಾರ್ಯಕರ್ತೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕುಣಿಗಲ್ ತಾಲೂಕಿನ ನಾಗೇಗೌಡನ ಪಾಳ್ಯ ಗ್ರಾಮದಲ್ಲಿ ನಡೆದಿದೆ.
ಗೀತಾ (29) ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಕಾರ್ಯಕರ್ತೆ. ಗೀತಾ ಅವರು ಮನೆಯಲ್ಲೇ ಸೀರೆಯಿಂದ ಫ್ಯಾನ್‍ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಕುಟುಂಬದವರೇ ಅವರು ನೇಣು ಹಾಕಿಕೊಳ್ಳುವುದನ್ನು ಕಂಡು ನೇಣಿನ ಕುಣಿಕೆಯನ್ನ ಬಿಚ್ಚಿದ್ದಾರೆ. ನಂತರ ಅವರನ್ನು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರ್ಯಕರ್ತೆಯು ಹಿಂಬಡ್ತಿ ನೀಡಿದ ಕಾರಣಕ್ಕೆ ಬೇಸರಗೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾಗೇನಹಳ್ಳಿ ಮಿನಿ ಅಂಗನವಾಡಿ ಕೇಂದ್ರದಿಂದ ಕಟ್ಟಿಗೇನಹಳ್ಳಿ ಕೇಂದ್ರಕ್ಕೆ ಮುಂಬಡ್ತಿ ನೀಡಿತ್ತು. ಮುಂಬಡ್ತಿಯಿಂದ ಹಿಂಬಡ್ತಿ ಆದೇಶ ನೀಡಿದಕ್ಕೆ ಬೇಸರಗೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ
ಗೀತಾ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀಧರ್, ಸಿಡಿಪಿಒ ಅನುಷಾ, ಗಂಗಭೈರಮ್ಮ ವಿರುದ್ಧ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದರು. ಘಟನೆಯು ಅಮೃತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.








