ಅಂಗನವಾಡಿ ಕಾರ್ಯಕರ್ತೆಯರಿಗೆ ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಸಂಬಳ ನೀಡಿಲ್ಲ ಎನ್ನಲಾಗಿದೆ.
ಅಂಗನವಾಡಿ ಕಾರ್ಯಕರ್ತೆಯರು ಹಗಲು- ರಾತ್ರಿ ಕಡಿಮೆ ಸಂಬಳಕ್ಕೆ ಕಾರ್ಯ ನಿರ್ವಹಿಸಿದರೂ ಸಂಬಳ ಸಿಗದಿರುವ ಹಿನ್ನೆಲೆಯಲ್ಲಿ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು ಆರೋಗ್ಯ, ಶಿಕ್ಷಣ ಸೇರಿದಂತೆ ಹಲವು ಕ್ಷೇತ್ರಗಳ ಕಾರ್ಯಗಳನ್ನು ತಳಮಟ್ಟದಲ್ಲಿ ಮಾಡಿ ಮುಗಿಸುತ್ತಾರೆ. ಮನೆ ಮನೆಗೆ ತೆರಳಿ ಡಾಟ ಕಲೆಕ್ಟ್ ಮಾಡುತ್ತಿರುತ್ತಾರೆ. ಆದರೆ, ಇಲಾಖೆ ಮಾತ್ರ ಅವರಿಗೆ ಸಂಬಳ ನೀಡದೆ ಸತಾಯಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ಮೊದಲೇ ಕಡಿಮೆ ಸಂಬಳ. ಇದರ ಮಧ್ಯೆ ಸಂಬಳವೂ ಆಗದಿದ್ದರೆ ಬದುಕು ಕಷ್ಟ ಎಂದು ಕಾರ್ಯಕರ್ತೆಯರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಅಷ್ಟೇ ಅಲ್ಲ, ಅಂಗನವಾಡಿ ಕೇಂದ್ರಗಳಲ್ಲಿ ತರಕಾರಿ ಖರೀದಿಸಲೂ ದುಡ್ಡು ಬಿಡುಗಡೆ ಮಾಡುತ್ತಿಲ್ಲ. ಸರ್ಕಾರ ಹೀಗೆ ವಿಳಂಬ ಧೋರಣೆ ಅನುಸರಿಸಿದರೆ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಬೀದಿಗಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.