Anil K Antony : ಕಾಂಗ್ರೆಸ್ ಪಕ್ಷಕ್ ಗುಡ್ ಬೈ ಹೇಳಿದ ಎ ಕೆ ಆಂಟಿನಿ ಅವರ ಪುತ್ರ ಅನಿಲ್ ಆಂಟೋನಿ…
ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಎ.ಕೆ.ಆಂಟನಿ ಅವರ ಪುತ್ರ ಅನಿಲ್ ಆಂಟೋನಿ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರವನ್ನು ಕಾಂಗ್ರೆಸ್ ತೋರಿಸಿದ್ದಕ್ಕೆ ಅನಿಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಮೋದಿ ವಿರುದ್ಧದ ದ್ವೇಷದ ಪ್ರಚಾರ ಅನುಚಿತ ಎಂಬ ಕಾರಣಕ್ಕೆ ತಮ್ಮದೇ ಪಕ್ಷದ ವಿರುದ್ಧ ಅಸಮಧಾನ ವ್ಯಕ್ತಪಡಿಸಿರುವ ಅನಿಲ್ ಕೆ ಆಂಟನಿ ಅವರು ಪಕ್ಷದ ಎಲ್ಲಾ ಹುದ್ದೆಗಳಿಗೆ ಬುಧವಾರ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
2002ರ ಗುಜರಾತ್ ಗಲಭೆ ಕುರಿತು ಪ್ರಧಾನಿ ಮೋದಿ ಕುರಿತ ಸಾಕ್ಷ್ಯ ಚಿತ್ರವನ್ನ ಕಾಂಗ್ರೆಸ್ ಇತ್ತೀಚೆಗೆ ಟ್ವೀಟ್ ಮಾಡಿತ್ತು. ಇದು ವಿವಾದಕ್ಕೆ ಕಾರಣವಾಗಿತ್ತು. ಪ್ರಧಾನಿ ಮೋದಿ ಅವರನ್ನು ಟೀಕಿಸುವ ಸಾಕ್ಷ್ಯಚಿತ್ರ ಪ್ರದರ್ಶನದ ಬಗ್ಗೆ ಕಳವಳ ವ್ಯಕ್ತಪಡಿಸಿದ ಅನಿಲ್ ಕೆ.ಆಂಟನಿ, ಪಕ್ಷದ ವರ್ತನೆ ನೋವುಂಟುಮಾಡಿದೆ ಮತ್ತು ವಾಕ್ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವ ಕಾಂಗ್ರೆಸ್ ತಮ್ಮ ಟ್ವೀಟ್‌ಗಳನ್ನು ಹಿಂಪಡೆಯುವಂತೆ ಕೇಳಿಕೊಂಡರು. ಇದು ದ್ವೇಷ, ನಿಂದನೆ ಮತ್ತು ವಂಚನೆಯ ಪರಮಾವಧಿ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಬಿಬಿಸಿ ಸಾಕ್ಷ್ಯಚಿತ್ರವು ದೇಶದ ಸಾರ್ವಭೌಮತೆಗೆ ಧಕ್ಕೆ ತಂದಿದೆ ಎಂದು ಟೀಕಿಸಿದ್ದಾರೆ. ಈ ನಡುವೆಯೇ ಕೇರಳದಲ್ಲಿ ಈ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲಾಗುವುದು ಎಂದು ಘೋಷಿಸಿದ ಎರಡು ದಿನಗಳಿಂದ ಅನಿಲ್ ಪಕ್ಷದ ಮೇಲೆ ಕೋಪಗೊಂಡಿದ್ದಾರೆ. ಬಿಬಿಸಿ ಸಾಕ್ಷ್ಯಚಿತ್ರ ದೇಶದ ಸಾರ್ವಭೌಮತೆಗೆ ಧಕ್ಕೆ ತರುತ್ತಿದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ಬಿಬಿಸಿ ಸಾಕ್ಷ್ಯಚಿತ್ರಕ್ಕೆ ದೇಶಾದ್ಯಂತ ಟೀಕೆಗಳು ವ್ಯಕ್ತವಾಗುತ್ತಿರುವ ಹೊತ್ತಿನಲ್ಲಿ ಅನಿಲ್ ಕೆ ಆಂಟನಿ ರಾಜೀನಾಮೆ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಹಲವರು ವಿವಿಧ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.
Anil K Antony : Anil Antony, son of AK Antony said goodbye to Congress party…