ರಾಮನಗರ : ಜೆಡಿಎಸ್ ರಾಜ್ಯ ಯುವ ಘಟದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹೊಸ ಬಾಂಬ್ ಒಂದನ್ನು ಸಿಡಿಸಿದ್ದಾರೆ.
ಶಾಸಕಿ ಅನಿತಾ ಕುಮಾರಸ್ವಾಮಿ (Anita Kumaraswamy) ಅವರು ಮತ್ತೆ ಸ್ಪರ್ಧೆ ಮಾಡುವುದಿಲ್ಲ. ಅವರು ಪಕ್ಷ ಸೂಚಿಸಿದರೆ ಹಿಂದೆ ಸರಿಯುತ್ತೇನೆ ಎಂದು ಹೇಳಿದ್ದಾರೆ ಎಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದ್ದಾರೆ.
ಅವರು ರಾಜಕೀಯದಿಂದ ಹಿಂದೆ ಸರಿದಿದ್ದಾರೆ. ಮಧುಗಿರಿ ಹಾಗೂ ರಾಮನಗರದಲ್ಲಿ ಅನಿರೀಕ್ಷಿತವಾಗಿ ಸ್ಪರ್ಧೆ ಮಾಡಿದ್ದರು ಕಳೆದ ಬಾರಿ ರಾಮನಗರದಿಂದ ಸ್ಪರ್ಧೆಗೆ ನನಗೂ ಒತ್ತಡ ಇತ್ತು. ಆಗ ನಾನು ಸಿನಿಮಾದಲ್ಲಿ ಬ್ಯುಸಿ ಇದ್ದೆ. ಹೀಗಾಗಿ ನನ್ನ ತಾಯಿ ಸ್ಪರ್ಧೆ ಮಾಡಿ ಗೆದ್ದರು. ಬಳಿಕ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕೆಲಸವನ್ನೂ ಮಾಡಿದ್ದಾರೆ. ಮತ್ತೆ ಅವರು ಯಾವುದೇ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ, ಅವರಿಗೆ ಆಸಕ್ತಿಯೂ ಇಲ್ಲ ಎಂದು ಹೇಳಿದ್ದಾರೆ.
ಹಾಸನ ಟಿಕೆಟ್ ವಿಚಾರವಾಗಿ ವರಿಷ್ಠರು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ. ದೇವೇಗೌಡರು ಜೆಡಿಎಸ್ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಹೋರಾಟದ ಹಿನ್ನೆಲೆಯಲ್ಲಿ ಬಂದ ಪಕ್ಷ ಜೆಡಿಎಸ್ ಪಕ್ಷವನ್ನು ಉಳಿಸಿಕೊಳ್ಳಲು ನಾವೆಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಒಂದು ವೇಳೆ ಪಕ್ಷ ಹೇಳಿದ್ರೆ ನಾನೇ ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ ಎಂದು ಹೇಳಿದ್ದಾರೆ.








