ಹುಬ್ಬಳ್ಳಿ: ಬುಧವಾರ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ನಗರದಲ್ಲಿನ ವೀರಾಪುರ ಓಣಿಯ ಅಂಜಲಿ ಎಂಬ ಯುವತಿಯ ಹತ್ಯೆ ಪ್ರಕಣಕ್ಕೆ ಸಂಬಂಧಿಸಿದಂತೆ ಬೆಂಡಿಗೇರಿ ಪೊಲೀಸ್ ಇನ್ಸ್‌ಪೆಕ್ಟರ್ ಚಂದ್ರಶೇಖರ ಚಿಕ್ಕೋಡಿ ಹಾಗೂ ಠಾಣೆಯ ಮುಖ್ಯಪೇದೆ ರೇಖಾ ಅಮಾನತುಗೊಂಡಿದ್ದಾರೆ. ಸಸ್ಪೆಂಡ್ ಮಾಡಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್ ಆದೇಶ ಹೊರಡಿಸಿದ್ದಾರೆ.
ಮೃತ ಯುವತಿ ಅಂಜಲಿ ಹತ್ಯೆಗೂ ಮುನ್ನ ಆರೋಪಿ ವಿಶ್ವನಿಂದ ಜೀವ ಬೆದರಿಕೆ ಇರುವುದಾಗಿ ಅಂಜಲಿ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ನಿರ್ಲಕ್ಷ್ಯ ವಹಿಸಿದ್ದರಿಂದ ಹತ್ಯೆ ನಡೆದಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅಂಜಲಿ ಕುಟುಂಬಸ್ಥರು ಠಾಣೆಗೆ ಬಂದು ಹೋಗಿರುವುದಕ್ಕೆ ಠಾಣೆಯ ಸಿಸಿಟಿವಿ ದೃಶ್ಯಗಳು ಸಾಕ್ಷಿಯಾಗಿವೆ. ಹೀಗಾಗಿಯೇ ಇಬ್ಬರನ್ನೂ ಅಮಾನತು ಮಾಡಲಾಗಿದೆ ಎನ್ನಲಾಗಿದೆ.
ನೇಹಾ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಕೊಲೆ ನಡೆದಿದೆ. 21 ವರ್ಷದ ಅಂಜಲಿ ಎಂಬ ಯುವತಿ ಅಂಜಲಿ ಎಂಬಾಕೆಯನ್ನು ವಿಶ್ವ ಅಲಿಯಾಸ್ ಗಿರೀಶ್ ಎಂಬ ಯುವಕ ಮನೆಗೆ ನುಗ್ಗಿ ಹತ್ಯೆ ಮಾಡಿದ್ದಾನೆ. ಅಂಜಲಿ ಪ್ರೀತಿ ನಿರಾಕರಿಸಿದ್ದಕ್ಕೆ ವಿಶ್ವ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಗಾಗಿ 2 ವಿಶೇಷ ತಂಡ ರಚನೆ ಮಾಡಲಾಗಿದೆ.