ಬಳ್ಳಾರಿ : ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಭೂಮಿ ಪೂಜೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ಅಂಜನಾದ್ರಿ ಬೆಟ್ಟದ ಕಲ್ಲು ಬಳಕೆ ಮಾಡಲಾಗುತ್ತದೆ ಎಂದು ಶಾಸಕ ಗಾಲಿ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್ ರೆಡ್ಡಿ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗುತ್ತಿರೋದು ನಮಗೆಲ್ಲ ಖುಷಿ ತಂದಿದೆ. ಅಂಜನಾದ್ರಿ ಬೆಟ್ಟದಲ್ಲಿ ವಾಯು, ಸುಗ್ರೀವ, ರಾಮನೂ ಕೂಡ ನೆಲೆಸಿದ್ದ ಎಂಬ ಪ್ರತೀತಿಯಿದೆ. ಹೀಗಾಗಿ ಅಂಜನಾದ್ರಿ ಬೆಟ್ಟದಿಂದ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಒಂದು ಕಲ್ಲನ್ನು ಒಯ್ಯಲಾಗಿದೆ. ರಾಮಮಂದಿರದಲ್ಲೂ ಕೂಡ ಅಂಜನಾದ್ರಿ ಬೆಟ್ಟದ ಕಲ್ಲನ್ನು ನಾವು ನೋಡಬಹುದಾಗಿದೆ ಎಂದು ತಿಳಿಸಿದರು.
ಇದೇ ವೇಳೆ ಸಿಎಂಗೆ ಕೊರೊನಾ ಸೋಂಕು ದೃಢಪಟ್ಟ ಬಗ್ಗೆ ಮಾತನಾಡಿದ ಶಾಸಕರು, ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ತಗುಲಿರುವ ವಿಚಾರ ನಿನ್ನೆ ಗೊತ್ತಾಯ್ತು. ವಿಷಯ ಕೇಳಿ ತುಂಬಾ ನೋವಾಯ್ತು. ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಆರೋಗ್ಯ ಮಾತೆಯಲ್ಲಿ ಪ್ರಾರ್ಥಿಸುವುದಾಗಿ ಎಂದು ಸೋಮಶೇಖರ್ ತಿಳಿಸಿದರು.