ADVERTISEMENT
Tuesday, June 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

Shwetha by Shwetha
June 23, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಈಗ ದೊಡ್ಡ ಮಟ್ಟದ ಪರಿಷ್ಕರಣೆ ಎದುರಾಗಿದೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಬೆನ್ನಲ್ಲೇ ಈಗ ಆಹಾರ ಇಲಾಖೆಯಲ್ಲೂ ಕ್ರಾಂತಿಕಾರಿ ಬದಲಾವಣೆಗೆ ಸರ್ಕಾರ ಮುಂದಾಗಿದ್ದು, ಸುಮಾರು 14 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಲು ಸಿದ್ಧತೆ ನಡೆಸಿದೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಹಿತಿ ನೀಡಿದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ, ಅನ್ನಭಾಗ್ಯ ಯೋಜನೆಯ ಸೌಲಭ್ಯಗಳು ಕೇವಲ ಅರ್ಹ ಬಡವರಿಗೆ ಮಾತ್ರ ತಲುಪಬೇಕು ಎನ್ನುವುದು ಸರ್ಕಾರದ ಸ್ಪಷ್ಟ ಉದ್ದೇಶವಾಗಿದೆ. ಆದರೆ ಸದ್ಯದ ಅಂಕಿಅಂಶಗಳ ಪ್ರಕಾರ ರಾಜ್ಯದಲ್ಲಿ ಸುಮಾರು 13 ರಿಂದ 14 ಲಕ್ಷ ಜನರು ಅನರ್ಹರಾಗಿದ್ದರೂ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಅಂತಹವರನ್ನು ಪತ್ತೆ ಹಚ್ಚಿ ಪಟ್ಟಿಯಿಂದ ಕೈಬಿಡುವ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ತಿಳಿಸಿದರು.

Related posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಬಸ್ ಟಿಕೆಟ್ ದರ ಮತ್ತೆ ಏರಿಕೆಯಾಗುತ್ತಾ? ಸರ್ಕಾರಕ್ಕೆ ಸಾರಿಗೆ ನಿಗಮಗಳ ಮನವಿ

June 23, 2026
ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ  ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

June 23, 2026

ಯಾರು ಆರ್ಥಿಕವಾಗಿ ಸದೃಢರಾಗಿದ್ದರೂ ಬಿಪಿಎಲ್ ಕಾರ್ಡ್ ಬಳಸುತ್ತಿದ್ದಾರೋ, ಅವರು ಸ್ವಯಂಪ್ರೇರಿತರಾಗಿ ತಮ್ಮ ಕಾರ್ಡ್‌ಗಳನ್ನು ಎಪಿಎಲ್ ವರ್ಗಕ್ಕೆ ಬದಲಿಸಿಕೊಳ್ಳಬೇಕು ಎಂದು ಸರ್ಕಾರ ಈಗಾಗಲೇ ತಿಳಿಸಿದೆ. ಈಗಾಗಲೇ ಈ ಬಗ್ಗೆ ವರದಿ ಸಿದ್ಧವಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ಅಧಿಕೃತ ಆದೇಶ ಹೊರಬೀಳಲಿದೆ. ಈ ಕ್ರಮದಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುವುದು ತಪ್ಪುವುದಲ್ಲದೆ, ನೈಜ ಬಡವರಿಗೆ ಹೆಚ್ಚಿನ ನೆರವು ನೀಡಲು ಸಾಧ್ಯವಾಗುತ್ತದೆ ಎಂದು ಮುನಿಯಪ್ಪ ವಿವರಿಸಿದರು.

ರಾಜ್ಯ ಸರ್ಕಾರ ಈಗ ತನ್ನ ಯೋಜನೆಗಳ ಮತ್ತು ಆಡಳಿತ ವೈಖರಿಯ ಪುನರ್ ವಿಮರ್ಶೆಗೆ ಇಳಿದಿದ್ದು, ಇದು ಫಲಾನುಭವಿಗಳು ಮತ್ತು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಅರ್ಹರು ಆತಂಕಪಡುವ ಅಗತ್ಯವಿಲ್ಲದಿದ್ದರೂ, ಸುಳ್ಳು ಮಾಹಿತಿ ನೀಡಿ ಕಾರ್ಡ್ ಪಡೆದವರಿಗೆ ಮಾತ್ರ ಈ ಸರ್ಜರಿ ಬಿಸಿ ಮುಟ್ಟಿಸುವುದು ಖಚಿತವಾಗಿದೆ.

ShareTweetSendShare
Join us on:

Related Posts

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಬಸ್ ಟಿಕೆಟ್ ದರ ಮತ್ತೆ ಏರಿಕೆಯಾಗುತ್ತಾ? ಸರ್ಕಾರಕ್ಕೆ ಸಾರಿಗೆ ನಿಗಮಗಳ ಮನವಿ

by Shwetha
June 23, 2026
0

ಇರಾನ್–ಅಮೆರಿಕ ಉದ್ವಿಗ್ನತೆಯ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ದೇಶದಲ್ಲಿ ಡೀಸೆಲ್ ದರವು ಲೀಟರ್‌ಗೆ ಸುಮಾರು ₹8ರವರೆಗೆ ಹೆಚ್ಚಳವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ....

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ  ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

by Shwetha
June 23, 2026
0

ಬೆಂಗಳೂರು: ಕನ್ನಡ ಸಿನಿಮಾ ರಂಗದಿಂದ ವೃತ್ತಿ ಜೀವನ ಆರಂಭಿಸಿ, ಇಂದು ಇಡೀ ದಕ್ಷಿಣ ಭಾರತದಾದ್ಯಂತ ಮಿಂಚುತ್ತಿರುವ ಯುವ ನಟಿ ಶ್ರೀಲೀಲಾಗೆ ಮುಂಬೈನಲ್ಲಿ ಕಹಿ ಅನುಭವ ಉಂಟಾಗಿದೆ. ಅಂತರರಾಷ್ಟ್ರೀಯ...

ಟೆಲಿಗ್ರಾಮ್ ಮೇಲಿನ ನಿಷೇಧ ತೆರವು; ಮೆಸೇಜ್ ಎಡಿಟ್‌ ಫೀಚರ್‌ಗೆ ನಿರ್ಬಂಧ ಮುಂದುವರಿಕೆ

ಟೆಲಿಗ್ರಾಮ್ ಮೇಲಿನ ನಿಷೇಧ ತೆರವು; ಮೆಸೇಜ್ ಎಡಿಟ್‌ ಫೀಚರ್‌ಗೆ ನಿರ್ಬಂಧ ಮುಂದುವರಿಕೆ

by Shwetha
June 23, 2026
0

ನೀಟ್ 2026 ಮರುಪರೀಕ್ಷೆಯ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್ ಮೇಲೆ ವಿಧಿಸಲಾಗಿದ್ದ ತಾತ್ಕಾಲಿಕ ನಿಷೇಧವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಆದರೆ, ಆ್ಯಪ್‌ನ ಮೆಸೇಜ್-ಎಡಿಟಿಂಗ್ ಸೌಲಭ್ಯದ ಮೇಲಿನ ನಿರ್ಬಂಧವನ್ನು ಜೂನ್...

ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ದೆವು, ಈಗ ರಾಜ್ಯದಲ್ಲಿ ವಿರೋಧ ಪಕ್ಷವೇ ಸತ್ತು ಹೋಗಿದೆ: ಕೆ ಎಸ್ ಈಶ್ವರಪ್ಪ

ದುಡ್ಡು ಕೊಟ್ಟು 17 ಶಾಸಕರನ್ನು ಖರೀದಿಸಿದ್ದೇ ಬಿಜೆಪಿ ಸರ್ಕಾರದ ಪತನಕ್ಕೆ ಕಾರಣ: BJP ವಿರುದ್ಧವೇ ಸ್ಪೋಟಕ ಸತ್ಯ ಬಿಚ್ಚಿಟ್ಟ ಕೆ.ಎಸ್. ಈಶ್ವರಪ್ಪ

by Shwetha
June 23, 2026
0

ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಚಲನ ಮೂಡಿಸುವಂತಹ ಹೇಳಿಕೆಯೊಂದನ್ನು ಮಾಜಿ ಉಪಮುಖ್ಯಮಂತ್ರಿ ಹಾಗೂ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ನೀಡಿದ್ದಾರೆ. ಹಿಂದಿನ ಅವಧಿಯಲ್ಲಿ 17 ಜನ ಕಾಂಗ್ರೆಸ್ ಹಾಗೂ...

Tejasvi Surya

ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ತೇಜಸ್ವಿ ಸೂರ್ಯ ತೆಲಂಗಾಣ ಪ್ರವಾಸ ರದ್ದು

by Shwetha
June 23, 2026
0

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ನಿಗದಿತ ತೆಲಂಗಾಣ ಪ್ರವಾಸ ರದ್ದಾಗಿದೆ. ಅವರು ಇಂದು ನಡೆಯಲಿದ್ದ 'ಜೆನ್‌ಝಡ್ ಕಾಶ್ಮೀರ್' ಕಾರ್ಯಕ್ರಮದಲ್ಲಿ ಭಾಗವಹಿಸಲು ಉದ್ದೇಶಿಸಿದ್ದರು. ಆದರೆ, ಅವರ ಭೇಟಿಯನ್ನು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram