National : ಕಿರಾಣಿ ಅಂಗಡಿಯಲ್ಲಿ ಮದ್ಯ ಮಾರಾಟಕ್ಕೆ ಅನುಮತಿ…. ಅಣ್ಣಾ ಹಜಾರೆ ಆಕ್ರೋಶ…
ಮುಂಬೈ : ಮಹಾರಾಷ್ಟ್ರ ಸರ್ಕಾರ ಸೂಪರ್ ಮಾರ್ಕೆಟ್ ಮತ್ತು ಕಿರಾಣಿ ಅಂಗಡಿಗಳಲ್ಲಿ ವೈನ್ ( Alchohol ) ಮಾರಾಟಕ್ಕೆ ಅವಕಾಶ ನೀಡಿರುವುದನ್ನ ಹಿರಿಯ ಸಾಮಾಜಿಕ ಹೋರಾಟಗಾರರಾದ ಅಣ್ಣಾ ಹಜಾರೆ ಅವರು ತೀವ್ರವಾಗಿ ಖಂಡಿಸಿದ್ದಾರೆ.. ಅಲ್ಲದೇ ಆರ್ಥಿಕ ಲಾಭಕ್ಕಾಗಿ ಮದ್ಯ ಮಾರಾಟಕ್ಕೆ ಆದ್ಯತೆ ನೀಡುತ್ತಿರುವುದು ದುರದೃಷ್ಟಕರ ಎಂದು ಅಸಮಾಧಾನ ಹೊರಹಾಕಿದ್ದಾರೆ..
ಈ ಕುರಿತು ಮಾಧ್ಯಮಗಳೊಂಡಿಗೆ ಮಾತನಾಡಿರುವ ಅವರು , ಮಹಾರಾಷ್ಟ್ರ ಸರ್ಕಾರವು ಆರ್ಥಿಕ ಲಾಭಕ್ಕಾಗಿ ಮದ್ಯ ಮಾರಾಟಕ್ಕೆ ಆದ್ಯತೆ ನೀಡುತ್ತಿರುವುದು ದುರದೃಷ್ಟಕರವಾಗಿದೆ. ಮಾದಕ ದ್ರವ್ಯ, ಮದ್ಯವ್ಯಸನದಿಂದ ಜನರನ್ನು ದೂರವಿಡುವುದು ಸರ್ಕಾರದ ಕರ್ತವ್ಯ. ಆದ್ರೆ ಆದಾಯಕ್ಕಾಗಿ ಮದ್ಯಪಾನ ಮತ್ತು ವ್ಯಸನಕ್ಕೆ ಉತ್ತೇಜನ ನೀಡುವ ನಿರ್ಧಾರ ತೆಗೆದುಕೊಳ್ಳುತ್ತಿರುವುದು ದುರದೃಷ್ಟಕರ ಸಂಗತಿ ಎಂದಿದ್ದಾರೆ.
anna hajaare opposes maharashtra government – saakshatv
ರಾಜ್ಯ ಸರ್ಕಾರ ಇತ್ತೀಚೆಗೆ ಸೂಪರ್ ಮಾರ್ಕೆಟ್ ಮತ್ತು ಕಿರಾಣಿ ಅಂಗಡಿಗಳಲ್ಲಿ ವೈನ್ ಮಾರಾಟಕ್ಕೆ ಅವಕಾಶ ನೀಡಲು ನಿರ್ಧರಿಸಿದೆ. ರೈತರ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಇಂತಹ ನಿರ್ಧಾರ ರಾಜ್ಯವನ್ನು ಎಲ್ಲಿಗೆ ಕೊಂಡೊಯ್ಯುತ್ತದೆ ಎಂಬುದು ನಿಜವಾದ ಪ್ರಶ್ನೆ ಎಂದು ಅಣ್ಣಾ ಹಜಾರೆ ಮಹಾರಾಷ್ಟ್ರ ಸರ್ಕಾರದ ನಡೆ ವಿರುದ್ಧ ಬೇಸರ ಹೊರಹಾಕಿದ್ದಾರೆ..









