ಮಹರಾಷ್ಟ್ರ ಸರಕಾಆರದ ವಿರುದ್ಧ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ Saaksha Tv
ಮುಂಬೈ: ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು ಫೆ.14 ರಿಂದ ಮಹರಾಷ್ಟ್ರ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ದೊಡ್ಡ ಕಿರಾಣಿ ಅಂಗಡಿಗಳಲ್ಲಿ ಪಾನ್, ಗುಟ್ಕಾ ಮಾರಾಟ, ಸೂಪರ್ ಮಾರ್ಕೆಟ್ಗಳಲ್ಲಿ ಮದ್ಯ ಮಾರಾಟಕ್ಕೆ ಮಹಾರಾಷ್ಟ್ರ ಸರ್ಕಾರ ಅವಕಾಶ ನೀಡಿದೆ. ಇದರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅಣ್ಣಾ ಹಜಾರೆ ಅವರು, ಈ ನೀತಿಯನ್ನು ವಾಪಸ್ ಪಡೆಯಬೇಕು, ಇಲ್ಲದಿದ್ದರೆ ಫೆ.14ರಿಂದ ರಾಳೇಗಣ ಸಿದ್ಧಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡುವುದಾಗಿ ತಿಳಸಿದ್ದಾರೆ.
ರಾಜ್ಯ ಸರ್ಕಾರ ಯುವ ಸಮುದಾಯದ ಬಗ್ಗೆ ಕಾಳಜಿ ವಹಿಸಬೇಕು. ಕಿರಾಣಿ ಅಂಗಡಿಗಳಲ್ಲಿ ಪಾನ್, ಗುಟ್ಕಾ ಮಾರಾಟವನ್ನು ತಕ್ಷಣಕ್ಕೆ ನಿಲ್ಲಿಸಬೇಕು. ಸೂಪರ್ ಮಾರ್ಕೆರ್ಟ್ಗಳಲ್ಲಿ ಮದ್ಯ ಮಾರಾಟಕ್ಕೆ ನೀಡಿದ ಅನುಮತಿ ವಾಪಸ್ ಪಡೆಯಬೇಕು ಎಂದು ಅಣ್ಣಾ ಹಜಾರೆ ಅವರು 4 ಬಾರಿ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು ಈ ಹಿಂದೆ ಹಲವಾರು ಮಹತ್ತರ ಹೋರಾಟಗಳ ನೇತೃತ್ವ ವಹಿಸಿದ್ದರು. ಸಮಾಜದ ಒಳಿತಿಗಾಗಿ ನಾನು ಈವರೆಗೂ 22 ಉಪವಾಸ ಸತ್ಯಾಗ್ರಹಗಳನ್ನು ನಡೆಸಿದ್ದೇನೆ. ಇದು ನನ್ನ ಕೊನೆಯ ಉಪವಾಸ ಸತ್ಯಾಗ್ರಹವಾಗಿರಲಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.








