ರೈತರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದೆ ಇದ್ದರೆ ಉಪವಾಸ ಸತ್ಯಾಗ್ರಹ – ಅಣ್ಣಾ ಹಜಾರೆ ಎಚ್ಚರಿಕೆ Anna Hazare hunger strike
ಹೊಸದಿಲ್ಲಿ, ಡಿಸೆಂಬರ್29: ರೈತರ ಪರವಾಗಿ ತಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದೆ ಇದ್ದರೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಕೇಂದ್ರ ಸರ್ಕಾರಕ್ಕೆ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಎಚ್ಚರಿಕೆ ನೀಡಿದ್ದಾರೆ. Anna Hazare hunger strike

ಭ್ರಷ್ಟಾಚಾರ ವಿರುದ್ದ ಸಾರ್ವಜನಿಕ ಚಳವಳಿಯ ನೇತೃತ್ವ ವಹಿಸಿ ಯುಪಿಎ ಸರ್ಕಾರದ ಪತನಕ್ಕೆ ಕಾರಣವಾಗಿದ್ದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಈಗ ರೈತರ ಬೆಂಬಲಕ್ಕೆ ನಿಂತಿದ್ದಾರೆ. ಮೂರು ಕೃಷಿ ಕಾಯ್ದೆಗಳ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿದ್ದರೆ ತಾವು ನಡೆಸುವ ಸತ್ಯಾಗ್ರಹ ತಮ್ಮ ಅಂತಿಮ ಹೋರಾಟವಾಗಲಿದೆ ಎಂದು 83 ವರ್ಷದ ಅಣ್ಣಾ ಹಜಾರೆ ಕೇಂದ್ರಕ್ಕೆ ಎಚ್ಚರಿಕೆ ನೀಡಿದ್ದಾರೆ.
1992ರಲ್ಲಿ ಭಾರತ ಸರ್ಕಾರದಿಂದ ಪದ್ಮ ಭೂಷಣ ಪ್ರಶಸ್ತಿಗೆ ಭಾಜನರಾದ ಭಾರತೀಯ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ 1991ರಲ್ಲಿ ಭ್ರಷ್ಟಾಚಾರದ ವಿರೋಧಿಸಿ ಭ್ರಷ್ಟಾಚಾರ ವಿರೋಧಿ ಜನ ಆಂದೋಲನ ಎಂಬ ಸಾರ್ವಜನಿಕ ಚಳವಳಿ ಆರಂಭಿಸಿದರು.
ಸಾರ್ವಜನಿಕ ಕಛೇರಿಗಳಲ್ಲಿನ ಭ್ರಷ್ಟಾಚಾರ ವಿರೋಧಿಸಿ ಲೋಕಪಾಲ ಕಾಯ್ದೆಯನ್ನು ಜಾರಿಗೊಳಿಸುವಂತೆ ಸರ್ಕಾರಕ್ಕೆ ಒತ್ತಡ ಹೇರಿದ್ದ ಅವರು 2011ರ ಎಪ್ರಿಲ್ 5ರಿಂದ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ಕೈಗೊಂಡರು.
ಮೋಟಾರು ವಾಹನ ದಾಖಲೆಗಳ ಸಿಂಧುತ್ವ ಮಾರ್ಚ್ 31, 2021 ರವರೆಗೆ ಮಾನ್ಯ
ಸರ್ಕಾರಿ ಸಂಸ್ಥೆಯಲ್ಲಿನ ಭ್ರಷ್ಟಾಚಾರದಿಂದ ರಾಜ್ಯ ಸರ್ಕಾರಗಳಿಗೆ ಕೋಟ್ಯಂತರ ರೂಪಾಯಿ ವಂಚನೆಯಾಗಿರುವುದನ್ನು ಅಣ್ಣಾ ಹಜಾರೆ ಪುರಾವೆಗಳ ಸಮೇತ ಸರ್ಕಾರಕ್ಕೆ ಮನದಟ್ಟು ಮಾಡಿದರು. ಆದರೆ ಅಂದು ಕೇಂದ್ರದಲ್ಲಿದ್ದ ಯುಪಿಎ ಸರ್ಕಾರದ ಮಂತ್ರಿಯೂ ಹಗರಣದಲ್ಲಿ ಭಾಗಿಯಾಗಿದ್ದ ಕಾರಣ, ಕೇಂದ್ರವು ಕ್ರಮ ಕೈಗೊಳ್ಳಲು ಹಿಂದೇಟು ಹಾಕಿತ್ತು. ಆಗ ಆಮರಣಾಂತ ಉಪವಾಸ ಕೈಗೊಂಡ ಅಣ್ಣಾ ಹಜಾರೆ ತಾವು ಪಡೆದಿದ್ದ ಪದ್ಮಶ್ರೀ ಪ್ರಶಸ್ತಿಯನ್ನು ರಾಷ್ಟ್ರಪತಿಗಳಿಗೆ ಹಿಂದಿರುಗಿಸಿದರು. ಇದರಿಂದ ಎಚ್ಚೆತ್ತ ಯುಪಿಎ ಸರ್ಕಾರ ಕೊನೆಗೆ ಅಪರಾಧಿಗಳ ವಿರುದ್ಧ ಕ್ರಮ ಕೈಗೊಂಡಿತ್ತು.
ಇದೀಗ ರೈತರ ಶಕ್ತಿಯಾಗಿ ನಿಂತಿರುವ ಅಣ್ಣಾ ಹಜಾರೆ ಮತ್ತೊಮ್ಮೆ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿಯೂ ಮತ್ತು ಇದು ತಮ್ಮ ಅಂತಿಮ ಹೋರಾಟವಾಗಲಿದೆ ಎಂದೂ ಎಚ್ಚರಿಕೆ ನೀಡಿದ್ದಾರೆ.
ತನ್ನ ಹುಟ್ಟೂರಾದ ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯ ರಾಳೆಗಣಸಿದ್ಧಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಳೆದ ಮೂರು ವರ್ಷಗಳಿಂದ ತಾನು ರೈತರ ಪರವಾಗಿ ಹೋರಾಟ ಮಾಡುತ್ತಿದ್ದೇನೆ. ಆದರೆ ಕೇಂದ್ರ ಸರ್ಕಾರ ಸ್ವಲ್ಪವೂ ಲಕ್ಷ್ಯ ವಹಿಸಿಲ್ಲ.

ಸುಳ್ಳು ಭರವಸೆಗಳನ್ನು ನೀಡುತ್ತಿರುವ ಸರ್ಕಾರದ ಮೇಲೆ ನನಗೆ ನಂಬಿಕೆ ಸಂಪೂರ್ಣ ಹೊರಟು ಹೋಗಿದೆ. ಈಗ ತನ್ನ ಬೇಡಿಕೆ ಈಡೇರಿಸಲು ಕೇಂದ್ರ ಸರ್ಕಾರಕ್ಕೆ ಒಂದು ತಿಂಗಳು ಗಡುವು ಕೊಟ್ಟಿದ್ದೇನೆ. ಜನವರಿ ಅಂತ್ಯದ ಒಳಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ನಾನು ಉಪವಾಸ ಸತ್ಯಾಗ್ರಹ ನಡೆಸಲಿದ್ದು, ಇದು ತನ್ನ ಕೊನೆಯ ಪ್ರತಿಭಟನಾ ಅಸ್ತ್ರವಾಗಲಿದೆ ಎಂದು ಹೇಳಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
https://twitter.com/SaakshaTv/status/1343586719208071168?s=19
https://twitter.com/SaakshaTv/status/1343587039950721026?s=19








