ತ್ರಿವಿಧ ದಾಸೋಹಿ ಅಭಿನವ ಅನ್ನದಾನೇಶ್ವರ ಸ್ವಾಮೀಜಿ ಲಿಂಗೈಕ್ಯ
ಗದಗ : ಹಾಲಕೆರೆ ಶ್ರೀಅನ್ನದಾನೇಶ್ವರ ಸಂಸ್ಥಾನಮಠದ ತ್ರಿವಿಧ ದಾಸೋಹಿ ಅಭಿನವ ಅನ್ನದಾನೇಶ್ವರ ಡಾ.ಸಂಗನಬಸವ ಸ್ವಾಮೀಜಿ ಅವರು ಇಂದು ಮುಂಜಾನೆ ಲಿಂಗೈಕ್ಯರಾಗಿದ್ದಾರೆ.
ಸ್ವಾಮೀಜಿಗಳು ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಅವರಿಗೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು.
ಆದ್ರೆ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಸ್ವಾಮೀಜಿಗಳು ಕೊನೆಯುಸಿರೆಳೆದಿದ್ದಾರೆ. ಇತ್ತ ಶ್ರೀಗಳ ಅಗಲಿಕೆಯಿಂದ ಭಕ್ತ ಸಮೂಹ ಶೋಕ ಸಾಗರದಲ್ಲಿದೆ.
ಇನ್ನು ಹಾಲಕೆರೆಯ ಡಾ.ಅಭಿನವ ಅನ್ನದಾನ ಸ್ವಾಮೀಜಿಗಳು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ನರೇಗಲ್ ಪಟ್ಟಣದ ವರ್ತಕರ ಸಂಘದಿಂದ ಸೋಮವಾರ ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟು ಬಂದ್ ಮಾಡುವ ಮೂಲಕ ಗೌರವ ಸೂಚಿಸುತ್ತಿದ್ದಾರೆ.
ಇನ್ನು ಶ್ರೀಗಳ ಅಗಲಿಕೆಗೆ ರಾಜ್ಯದ ರಾಜಕೀಯ ಗಣ್ಯರು, ಟ್ವಿಟ್ಟರ್ ವೇದಿಕೆಯಾಗಿ ಸಂತಾಪ ಸೂಚಿಸುತ್ತಿದ್ದಾರೆ.