ನವದೆಹಲಿ : ಮಾಜಿ ಐಪಿಎಸ್ ಅಧಿಕಾರಿ, ಕರ್ನಾಟಕದ ಸಿಂಗಂ ಎಂದೇ ಪ್ರಸಿದ್ದರಾಗಿದ್ದ ಕೆ. ಅಣ್ಣಾಮಲೈ ಅವರು ಅಧಿಕೃತವಾಗಿ ಇಂದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಇಂದು ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಅಣ್ಣಾಮಲೈ ಅಧಿಕೃತವಾಗಿ ಕೇಸರಿ ಪಡೆಗೆ ಸೇರ್ಪಡೆಗೊಂಡರು.
ಬಿಜೆಪಿ ಶಾಲು ಹೊದಿಸಿ, ಸೇರ್ಪಡೆ ಆದೇಶ ನೀಡುವ ಮೂಲಕ ಮುರುಳೀಧರ್ ರಾವ್, ಅಣ್ಣಾಮಲೈ ಅವರನ್ನು ಬಿಜೆಪಿಗೆ ಅಧಿಕೃತವಾಗಿ ಸೇರಿಸಿಕೊಂಡರು. ಈ ಮೂಲಕ ತಮಿಳುನಾಡು ರಾಜಕೀಯಕ್ಕೆ ಸಿಂಗಂ ಅಧಿಕೃತವಾಗಿ ಎಂಟ್ರಿ ಕೊಟ್ಟಂತಾಗಿದೆ.
ಈ ಕಾರ್ಯಕ್ರಮದಲ್ಲಿ ಬಿಜೆಪಿಯ ಮುರುಳೀಧರ್ ರಾವ್, ಸಂಬಿತ್ ಪಾತ್ರ, ತಮಿಳುನಾಡು ಬಿಜೆಪಿ ಅಧ್ಯಕ್ಷ ಮುರುಗನ್ ಭಾಗವಹಿಸಿದ್ದರು.









