ಮೈಸೂರು: ಜಮೀನು ವಿಚಾರವಾಗಿ ತಮ್ಮನೇ ಅಣ್ಣನನ್ನು ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್. ಡಿ ಕೋಟೆ ತಾಲೂಕಿನ ಹೈರಿಗೆ ಗ್ರಾಮದಲ್ಲಿ ನಡೆದಿದೆ.
ಹೈರಿಗೆ ಗ್ರಾಮದಲ್ಲಿ ಹಲವಾರು ವರ್ಷಗಳಿಂದ ಜಮೀನಿನ ವಿಚಾರಕ್ಕೆ ತಮ್ಮ ಗಂಗಾಧರ್ ಹಾಗೂ ಅಣ್ಣ ಮಾದೇಗೌಡ ನಡುವೆ ಜಗಳ ನಡೆಯುತ್ತಿತ್ತು. ನಿನ್ನೆ ಮತ್ತೆ ಅಣ್ಣ-ತಮ್ಮ ಜಮೀನು ವಿಚಾರವಾಗಿ ಜಗಳ ಮಾಡಿಕೊಂಡಿದ್ದಾರೆ. ಈ ವೇಳೆ ತಮ್ಮ ಗಂಗಾಧರ್, ಅಣ್ಣ ಮಾದೇಗೌಡನನ್ನು ಮಚ್ಚಿನಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಕೊಲೆ ಪ್ರಕರಣ ದಾಖಲಿಸಿಕೊಂಡ ಹೆಚ್.ಡಿ ಕೋಟೆ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಪುಟ್ಟಸ್ವಾಮಿ ನೇತೃತ್ವದಲ್ಲಿ ಪೊಲೀಸರು, ತಲೆ ಮರೆಸಿಕೊಂಡಿದ್ದ ಆರೋಪಿ ಗಂಗಾಧರ್‌ನನ್ನು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ.
ವಾಣಿಜ್ಯ ತೆರಿಗೆ ಇಲಾಖೆಯಿಂದ ಸಿಹಿ ಸುದ್ದಿ: ಬೇಕರಿ, ಕಾಂಡಿಮೆಂಟ್ಸ್ ಮಾಲೀಕರಿಗೆ ತೆರಿಗೆ ವಿನಾಯಿತಿ!
ನಗರದ ಬೇಕರಿ, ಜ್ಯೂಸ್ ಅಂಗಡಿ, ಕಾಂಡಿಮೆಂಟ್ಸ್ ಮಾಲೀಕರಿಗೆ ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆಯು ಮಹತ್ವದ ಸ್ಪಷ್ಟನೆಯನ್ನು ನೀಡಿದೆ. ಆನ್‌ಲೈನ್ ಮೂಲಕ ಹಣ ಸ್ವೀಕರಿಸಿದ ಸಣ್ಣ ವ್ಯಾಪಾರಿಗಳಿಗೆ ಇಲಾಖೆಯು...